ಸಂಕಷ್ಟದ ಕಾಲದಲ್ಲಿ ಇಸ್ರೇಲ್ ಜೊತೆ ಭಾರತ ನಿಲ್ಲಲಿದೆ; ಪ್ರಧಾನಿ ನರೇಂದ್ರ ಮೋದಿ
ನವದೆಹಲಿ; ಇಸ್ರೇಲ್ನಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರು ಪ್ರಧಾನಿ ನರೇಂದ್ರ ಮೋದಿಯವರ ಜೊತೆ ಮಾತನಾಡಿದ್ದಾರೆ. ಅಲ್ಲಿನ ಈಗ ಪರಿಸ್ಥಿತಿ ಬಗ್ಗೆ ಪ್ರಧಾನಿ ಮೋದಿ ಜೊತೆ ಹಂಚಿಕೊಂಡಿದ್ದಾರೆ. ಪ್ರಧಾನಿ ಮೋದಿಯವರೇ ಈ ಟ್ವೀಟ್ ನಲ್ಲಿ ಮಾಹಿತಿ ನೀಡಿದ್ದಾರೆ.
ʻ ಇಸ್ರೇಲ್ ಪ್ರಧಾನಿ ನೇತನ್ಯಾಹು ಅವರು ದೂರವಾಣಿ ಮೂಲಕ ಅಲ್ಲಿನ ಪರಿಸ್ಥಿತಿ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗಿ ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಈ ಸಂಕಷ್ಟದ ಸಮಯದಲ್ಲಿ ಇಸ್ರೇಲ್ ಜೊತೆ ಭಾರತದ ಜನ ನಿಲ್ಲಲಿದ್ದಾರೆ. ಭಾರತ ಯಾವತ್ತೂ ಭಯೋತ್ಪಾದನೆ ಹಾಗೂ ಅದರ ಎಲ್ಲಾ ರೂಪಗಳನ್ನು ಬಲವಾಗಿ ಖಂಡಿಸುತ್ತದೆ.ʼ ಎಂದು ಮೋದಿ ಟ್ವೀಟ್ ಮಾಡಿದ್ದಾರೆ.