CrimeNational

ನಾಂದೇಡ್‌ ಆಸ್ಪತ್ರೆಯಲ್ಲಿ ಒಂದೇ ವಾರದಲ್ಲಿ 108 ಮಂದಿ ದುರ್ಮರಣ

ಮುಂಬೈ; ಮಹಾರಾಷ್ಟ್ರದ ನಾಂದೇಡ್‌ ಸರ್ಕಾರಿ ಆಸ್ಪತ್ರೆಯಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. ಕಳೆದ ಎಂಟು ತಿಂಗಳಲ್ಲಿ ಇಲ್ಲಿ 108 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಈ ವಿಚಾರ ಭಾರಿ ಸಂಚಲನಕ್ಕೆ ಕಾರಣವಾಗಿದೆ. 

ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ 24 ಗಂಟೆಯಲ್ಲಿ ನವಜಾತ ಶಿಶು ಸೇರಿ 11 ಮಂದಿ ರೋಗಿಗಳು ಸಾವನ್ನಪ್ಪಿದ್ದಾರೆ. ಕಳೆದ 24 ಗಂಟೆಯಲ್ಲಿ 1,100ಕ್ಕೂ ಹೆಚ್ಚು ಜನರಿಗೆ ಪರೀಕ್ಷೆ ಮಾಡಲಾಗಿದ್ದು, 191 ಮಂದಿಯನ್ನು ದಾಖಲು ಮಾಡಿಕೊಳ್ಳಲಾಗಿದೆ. ಇನ್ನು ಸಾವಿನ ಬಗ್ಗೆ ಆಸ್ಪತ್ರೆ ಮುಖ್ಯಸ್ಥರು ಸಮಜಾಯಿಷಿ ನೀಡಿದ್ದು, ಆಸ್ಪತ್ರೆಯಲ್ಲಿ ಔಷಧಿ ಕೊರತೆ ಇಲ್ಲ. ಆದ್ರೆ ರೋಗಿಗಳ ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.

 

Share Post