ಚಂದ್ರಬಾಬು ನಾಯ್ಡು ಜೀವಕ್ಕೆ ಅಪಾಯವಿದೆ; ಅಮಿತ್ ಶಾಗೆ ನಾರಾ ಲೋಕೇಶ್ ದೂರು
ನವದೆಹಲಿ; ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಅವರು ಬುಧವಾರ ರಾತ್ರಿ ತೆಲಂಗಾಣ ಬಿಜೆಪಿ ಅಧ್ಯಕ್ಷ ಕಿಶನ್ ರೆಡ್ಡಿ ಮತ್ತು ಎಪಿ ಬಿಜೆಪಿ ಅಧ್ಯಕ್ಷೆ ಪುರಂದೇಶ್ವರಿ ಅವರೊಂದಿಗೆ ದೆಹಲಿಯಲ್ಲಿ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಚಂದ್ರಬಾಬು ಬಂಧನದ ವಿಚಾರವನ್ನು ಗೃಹ ಸಚಿವರ ಗಮನಕ್ಕೆ ತಂದಿರುವುದಾಗಿ ಲೋಕೇಶ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
ಆಂಧ್ರಪ್ರದೇಶದಲ್ಲಿ ವೈಎಸ್ಆರ್ಸಿಪಿ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡು ಚಂದ್ರಬಾಬು ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಅಮಿತ್ ಶಾಗೆ ವಿವರಿಸಿದರು. ಜೈಲಿನಲ್ಲಿರುವ ಚಂದ್ರಬಾಬುಗೆ ಜೀವ ಬೆದರಿಕೆ ಇದೆ ಎಂದು ಲೋಕೇಶ್ ಹೇಳಿದ್ದಾರೆ.