ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್; ಬಿಜೆಪಿ
ಬೆಂಗಳೂರು; ಈ ಹಿಂದೆ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಇದ್ದಾಗ ಕಾಂಗ್ರೆಸ್ ಪೋಸ್ಟರ್ ಸಮರ ನಡೆಸಿತ್ತು. ಬೊಮ್ಮಾಯಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮೀಷನ್ ಆರೋಪ ಮಾಡಲಾಗಿತ್ತು. ಆದ್ರೆ ಇದೀಗ ಬಿಜೆಪಿ ಸರದಿ. ಬಿಜೆಪಿ ಕೂಡಾ ಈಗ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಮೀಷನ್ ಆರೋಪ ಮಾಡುತ್ತಿದೆ. ಅದಕ್ಕಾಗಿ ಪೋಸ್ಟರ್ ಅಭಿಯಾನ ಶುರು ಮಾಡಿದೆ. ಟ್ವಿಟರ್ನಲ್ಲಿ ಬಿಜೆಪಿ ಒಂದು ಪೋಸ್ಟರ್ ಬಿಡುಗಡೆ ಮಾಡಿದ್ದು, ಅದರಲ್ಲಿ ಸಿಎಂ ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಕರೆದಿದೆ.
ಐಟಿ ದಾಳಿಗಳು ರಾಜ್ಯದಲ್ಲಿ ನಿರಂತರವಾಗಿ ನಡೆಯುತ್ತಿದ್ದು, ಕೆಲವರ ಮನೆಗಳಲ್ಲಿ ಕೋಟಿ ಕೋಟಿ ಹಣ ಸಿಗುತ್ತಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಪೋಸ್ಟರ್ ರಿಲೀಸ್ ಮಾಡಿದೆ. ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಬಿಜೆಪಿ ಟೀಕೆ ಮಾಡಿದ್ದು, ಕಲೆಕ್ಷನ್ ಮಾಸ್ಟರ್ ಎಂದು ಬರೆದಿರುವ, ಬಜೆಟ್ ಸೂಟ್ ಕೇಸ್ ಹಿಡಿದುಕೊಂಡ ಸಿದ್ದರಾಮಯ್ಯ ಚಿತ್ರವನ್ನು ಟ್ವಿಟರ್ನಲ್ಲಿ ಪೋಸ್ಟ್ ಮಾಡಲಾಗಿದೆ.