BengaluruPolitics

ಒರಿಜಿನಲ್‌ ಜೆಡಿಎಸ್‌ ನಮ್ಮದೇ, ನಾವು ಬಿಜೆಪಿ ಬೆಂಬಲಿಸಲ್ಲ; ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ

ಬೆಂಗಳೂರು; ಒರಿಜಿನಲ್‌ ಜೆಡಿಎಸ್‌ ನಮ್ಮದೇ, ನಾವು ಬಿಜೆಪಿಯನ್ನು ಬೆಂಬಲಿಸೋದಿಲ್ಲ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಅವರು ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್‌ ನೀಡಿದ್ದಾರೆ. ಬೆಂಗಳೂರಿನಲ್ಲಿ ತಮ್ಮ ಬೆಂಬಲಿಗರ ಸಭೆ ಬಳಿಕ ಇಬ್ರಾಹಿಂ ಅವರು ಮಾಧ್ಯಮಗಳ ಜೊತೆ ಮಾತನಾಡಿದರು.

ಒರಿಜಿನಲ್‌ ಜೆಡಿಎಸ್‌ ಪಕ್ಷ ನಮ್ಮದೇ. ನಾನು ಅದರ ಅಧ್ಯಕ್ಷನಾಗಿದ್ದೇನೆ. ನನ್ನನ್ನು ತೆಗೆಯಲು ಯಾರಿಗೂ ಸಾಧ್ಯವಿಲ್ಲ. ನಮಗೆ ಬಿಜೆಪಿಯನ್ನು ಸೋಲಿಸಬೇಕಿದೆ. ಹೀಗಾಗಿ ನಾವು ಬಿಜೆಪಿಯನ್ನು ಬೆಂಬಲಿಸೋದಿಲ್ಲ. ಬದಲಾಗಿ ನಾವು ಕಾಂಗ್ರೆಸ್‌ ಪಕ್ಷಗಳನ್ನು ಬೆಂಬಲಿಸುತ್ತೇವೆ ಎಂದು ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ. ಪಕ್ಷ ಕುಟುಂಬದ ಸ್ವತ್ತು ಅಲ್ಲ. ಹೀಗಾಗಿ ಪಕ್ಷದಲ್ಲಿನ ಎಲ್ಲರ ಅಭಿಪ್ರಾಯ ಪಡೆಯುವುದು ಮುಖ್ಯವಾಗುತ್ತದೆ. ಆದ್ರೆ ಜಿಲ್ಲಾ ಅಧ್ಯಕ್ಷರು ಕರೆಯಲಿಲ್ಲ. ಯಾರ ಅಭಿಪ್ರಾಯವನ್ನೂ ಕೇಳದ ಮೈತ್ರಿ ಮಾಡಿಕೊಳ್ಳಲಾಗಿದೆ. ನನ್ನ ಸಂಪರ್ಕದಲ್ಲಿ ಶಾಸಕರು ಇದ್ದಾರೆ. ಕೋರ್ ಕಮಿಟಿ ಮಾಡಿ ಸಾಧಕ ಭಾಧಕ ಮಾಡುತ್ತೇನೆ ಎಂದು ಇಬ್ರಾಹಿಂ ಹೇಳಿದ್ದಾರೆ.

 

Share Post