ಒಮಿಕ್ರಾನ್ ತಡೆಯಲು ಟಫ್ ರೂಲ್ಸ್ ಅಗತ್ಯ; ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ
ಬೆಂಗಳೂರು: ಒಮಿಕ್ರಾನ್ ತಡೆಯಲು ಬೆಂಗಳೂರಿನಲ್ಲಿ ಟಫ್ ರೂಲ್ಸ್ ಅಗತ್ಯ. ಕಠಿಣ ಕ್ರಮಗಳನ್ನು ಕೈಗೊಂಡಾಗ ಮಾತ್ರ ಜನ ಎಚ್ಚೆತ್ತುಕೊಳ್ಳುತ್ತಾರೆ ಎಂದು ಬಿಬಿಎಂಪಿ ಆಯುಕ್ತ ಗೌರವ್ ಗುಪ್ತ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂದು ಮಧ್ಯಾಹ್ನ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೇ ನಡೆಯಲಿದೆ. ಸಭೆಯಲ್ಲಿ ಈ ಬಗ್ಗೆ ಮನವಿ ಮಾಡುತ್ತೇನೆ. ಬೆಂಗಳೂರಿನಲ್ಲಿ ಆದಷ್ಟು ಟಫ್ ರೂಲ್ಸ್ ಜಾರಿ ಮಾಡಬೇಕೆಂದು ಮನವಿ ಮಾಡುತ್ತೇನೆ. ತಜ್ಞರ ಅಭಿಪ್ರಾಯ ಪಡೆದು ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಗೌರವ್ ಗುಪ್ತ ಹೇಳಿದ್ದಾರೆ.