ಸುರ್ಜೇವಾಲಾ ಕಲೆಕ್ಷನ್ ಏಜೆಂಟ್, ಕೆ.ಸಿ.ವೇಣುಗೋಪಾಲ್ ಕಮೀಷನ್ ಏಜೆಂಟ್; ಬಿಜೆಪಿ ಲೇವಡಿ
ಬೆಂಗಳೂರು; ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲಾ ಹಾಗೂ ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಬಂದಿರುವುದರ ಬಗ್ಗೆ ರಾಜ್ಯ ಬಿಜೆಪಿ ಲೇವಡಿ ಮಾಡಿದೆ. ಈ ಬಗ್ಗೆ ಟ್ವಿಟರ್ ಅಧಿಕೃತ ಖಾತೆಯಲ್ಲಿ ಪೋಸ್ಟ್ ಹಾಕಲಾಗಿದ್ದು, ಸುರ್ಜೇವಾಲಾರನ್ನು ಕಲೆಕ್ಷನ್ ಏಜೆಂಟ್ ಎಂದೂ, ಕೆ.ಸಿ.ವೇಣುಗೋಪಾಲ್‌ರನ್ನು ಕಮೀಷನ್ ಏಜೆಂಟ್ ಎಂದೂ ಕರೆಯಲಾಗಿದೆ.
ಬಿಜೆಪಿ ಮಾಡಿರುವ ಟ್ವೀಟ್ ವಿವರ ಇಲ್ಲಿದೆ;
ಕಲೆಕ್ಷನ್ ಏಜೆಂಟ್ ಸುರ್ಜೇವಾಲಾ ಮತ್ತು ಕಮಿಷನ್ ಏಜೆಂಟ್ ಕೆ.ಸಿ. ವೇಣುಗೋಪಾಲ್ ಅವರು ಕರ್ನಾಟಕಕ್ಕೆ ದಿಢೀರ್‌ನೇ ಆಗಮಿಸಿರುವ ಕಾರಣಗಳು:
✔️ ₹1000 ಕೋಟಿ ಕಲೆಕ್ಷನ್‌ನ ಮೇಲ್ವಿಚಾರಣೆ ನಡೆಸುವುದು..!
✔️ ನಿಗಮ ಮಂಡಳಿಗಳ ನೇಮಕಾತಿಗೆ ರೇಟ್ ಫಿಕ್ಸ್ ಮಾಡುವುದು..!
✔️ ಪಂಚ ರಾಜ್ಯ ಚುನಾವಣೆಗೆ ಹಣ ಸಾಗಣೆಯ ಸ್ಥಿತಿಗತಿ ತಿಳಿಯುವುದು..!
✔️ ಗುತ್ತಿಗೆದಾರರಿಗೆ ಹೆಚ್ಚುವರಿ ಪರ್ಸೆಂಟೇಜ್ ಫಿಕ್ಸ್ ಮಾಡುವುದು..!
✔️ ಅಧಿಕಾರಿಗಳಿಂದ ವಸೂಲಿಯ ವಾಸ್ತವ ಸ್ಥಿತಿ ಅರಿಯುವುದು..!
ಹೇಳಿದ ಸಮಯಕ್ಕೆ ಹೊರ ರಾಜ್ಯಗಳಿಗೆ ಇನ್ನೂ ಸಿದ್ದರಾಮಯ್ಯ ಅವರ #ATMSarkara ದ ಲೂಟಿ ಹಣ ತಲುಪದೆ ಇರುವ ಕಾರಣಕ್ಕೆ ಖುದ್ದು ಏಜೆಂಟರ್‌ಗಳೇ ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ.