ಜಗದೀಶ್ ಶೆಟ್ಟರ್ ಭೇಟಿಯಾದ ರಮೇಶ್ ಜಾರಕಿಹೊಳಿ; ಕಾಂಗ್ರೆಸ್ ಸೇರ್ತಾರಾ ಬೆಳಗಾವಿ ಸಾಹುಕಾರ್..?
ಬೆಂಗಳೂರು; ಉತ್ತರ ಕರ್ನಾಟಕ ಭಾಗದಲ್ಲಿನ ಬಿಜೆಪಿ ನಾಯಕರಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಳ ಹಾಕುತ್ತಿರುವುದು ಗೊತ್ತೇ ಹೊಣೆ. ಉತ್ತರ ಕರ್ನಾಟಕ ಭಾಗದಲ್ಲಿ ಅವರೇ ಆಪರೇಷನ್ ಹಸ್ತದ ಹೊಣೆ ಹೊತ್ತಿದ್ದಾರೆ. ಹೀಗಿರುವಾಗಲೇ ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರು ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿದ್ದಾರೆ. ಹೀಗಾಗಿ ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ಕಳೆದ ವಿಧಾನಸಭಾ ಚುನಾವಣೆ ವೇಳೆ ಟಿಕೆಟ್ ನಿರಾಕರಿಸಲಾಯಿತೆಂಬ ಕಾರಣಕ್ಕೆ ಜಗದೀಶ್ ಶೆಟ್ಟರ್ ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದರು. ಕಾಂಗ್ರೆಸ್‌ನಿಂದ ಟಿಕೆಟ್ ಸಿಕ್ತಾದರೂ ಅವರು ಗೆಲ್ಲಲು ಸಾಧ್ಯವಾಗಲಿಲ್ಲ. ಆದ್ರೆ ಕಾಂಗ್ರೆಸ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಿದೆ. ಇನ್ನು ಕಾಂಗ್ರೆಸ್ ಸೇರಿದ ಮೇಲೆ ಅಲರ್ಟ್ ಆಗಿರುವ ಜಗದೀಶ್ ಶೆಟ್ಟರ್ ಹಲವು ಬಿಜೆಪಿ ನಾಯಕರನ್ನು ಕಾಂಗ್ರೆಸ್‌ಗೆ ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈ ಬೆನ್ನಲ್ಲೇ ರಮೇಶ್ ಜಾರಕಿಹೊಳಿಯವರು ಜಗದೀಶ್ ಶೆಟ್ಟರ್ ಅವರ ಆರ್‌ಟಿ ನಗರದ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಉಭಯ ನಾಯಕರು ಸ್ವಲ್ಪ ಹೊತ್ತು ಗುಪ್ತವಾಗಿ ಮಾತುಕತೆ ನಡೆಸಿದ್ದಾರೆ. ಅಂದಹಾಗೆ ರಮೇಶ್ ಜಾರಕಿಹೊಳಿ ಅವರು ಆಪರೇಷನ್ ಕಮಲದ ಸಮಯದಲ್ಲಿ ಭಿನ್ನಮತೀಯರ ನೇತೃತ್ವ ವಹಿಸಿಕೊಂಡಿದ್ದರು. ಇವರ ನೇತೃತ್ವದಲ್ಲಿಯೇ 17 ಶಾಸಕರು ಕಾಂಗ್ರೆಸ್ ಹಾಗೂ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದರು. ಇದೀಗ ರಮೇಶ್ ಜಾರಕಿಹೊಳಿ ಮತ್ತೆ ಕಾಂಗ್ರೆಸ್‌ಗೆ ವಾಪಸಾಗುತ್ತಾರಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ.
ಇನ್ನು ಈ ಬಗ್ಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ಇಂದು ರಮೇಶ್ ಜಾರಕಿಹೊಳಿಯವರು ನನ್ನನ್ನು ಭೇಟಿಯಾಗಿಲ್ಲ. ಈ ಹಿಂದೆ ಭೇಟಿಯಾಗಿದ್ದಾರೆ. ಆದ್ರೆ ಇಂದು ಭೇಟಿಯಾಗಿಲ್ಲ ಎಂದು ಹೇಳಿದ್ದಾರೆ.