ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕಾನೂನು ಸಂಕಷ್ಟ
ಬೆಂಗಳೂರು; ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ರದ್ದುಕೋರಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾ ಮಾಡಿದೆ. ಅಷ್ಟೇ ಅಲ್ಲ, ಈ ಪ್ರಕರಣ ಸಂಬಂಧ ಸಿಬಿಐ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನೂ ತೆರವುಗೊಳಿಸಲಾಗಿದೆ. ಹೀಗಾಗಿ, ಡಿ.ಕೆ.ಶಿವಕುಮಾರ್ ಮತ್ತೆ ಸಿಬಿಐ ವಿಚಾರಣೆಗೆ ಹಾಜರಾಗಬೇಕಾದ ಅನಿವಾರ್ಯತೆ ಎದುರಾಗಿದೆ.
ತಡೆಯಾಜ್ಞೆ ತೆರವುಗೊಳಿಸಿರುವ ಹೈಕೋರ್ಟ್, ತನಿಖೆಯನ್ನು ಮೂರು ತಿಂಗಳೊಳಗೆ ಮುಗಿಸುವಂತೆ ಸಿಬಿಐ ಆದೇಶ ನೀಡಿದೆ. 2023ರಿಂದ 2018ರ ಮಧ್ಯದ ಅವಧಿಯಲ್ಲಿ ತಮ್ಮ ಆದಾಯಕ್ಕೂ ಮೀರಿ ಆಸ್ತಿ ಗಳಿಸಿದ್ದಾರೆ ಎಂಬ ಆರೋಪ ಡಿ.ಕೆ.ಶಿವಕುಮಾರ್ ಮೇಲಿದೆ. ಈ ಸಂಬಂಧ ಸಿಬಿಐ, 020ರ ಅಕ್ಟೋಬರ್ 3ರಂದು ಭ್ರಷ್ಟಾಚಾರ ನಿಗ್ರಹ ಕಾಯ್ದೆ 1988ರ ಅಡಿಯಲ್ಲಿ 13(2), 13(1)ಇ ಕ್ರಿಮಿನಲ್ ಪ್ರಕರಣ ದಾಖಲಿ ತನಿಖೆ ಆರಂಭಿಸಿತ್ತು.