ಮೆಟ್ರೋ ವಿಸ್ತೃತ ಮಾರ್ಗಕ್ಕೆ ಪ್ರಧಾನಿ ಚಾಲನೆ; ಕನ್ನಡದಲ್ಲೇ ಮಾತಾಡ್ತೀನೆಂದು ಸಿಎಂ
ಬೆಂಗಳೂರು; ಇಂದು ನಮ್ಮ ಮೆಟ್ರೋ ವಿಸ್ತೃತ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ಪೃೆನ್ಸ್ ಮೂಲಕ ಚಾಲನೆ ಕೊಟ್ಟರು.
ಕೆ.ಆರ್.ಪುರಂ-ಬೈಯಪ್ಪನಹಳ್ಳಿ ಮತ್ತು ಕೆಂಗೇರಿ- ಚಲ್ಲಘಟ್ಟದ ವಿಸ್ತೃತ ಮಾರ್ಗ ಇದಾಗಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡಾ ಭಾಗಿಯಾಗಿದ್ದರು.
ಗೃಹ ಕಚೇರಿ ಕೃಷ್ಣಾದಿಂದ ನಡೆದ ವಿಡಿಯೋ ಕಾನ್ಫರೆನ್ಸ್ನಲ್ಲಿ ಸಿಎಂ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿ ಹಲವರು ಪಾಲ್ಗೊಂಡಿದ್ದರು. ಕಾರ್ಯಕ್ರಮಕ್ಕೂ ಮೊದಲು ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅನೌಪಚಾರಿಕವಾಗಿ ಮಾತನಾಡಿದರು. ಈ ವೇಳೆ ಸಿದ್ದರಾಮಯ್ಯ ಅವರು ನಾನಂತೂ ಕನ್ನಡದಲ್ಲೇ ಮಾತನಾಡುತ್ತೇನೆ. ಹಿಂದಿ ನಮ್ಮ ನ್ಯಾಷನಲ್ ಲ್ಯಾಂಗ್ವೇಜ್ ಅಲ್ಲ. ಹಿಂದಿ ನನಗೆ ಅರ್ಥ ಆಗಲ್ಲ, ಅದಕ್ಕೆ ನಾನು ಕನ್ನಡದಲ್ಲೇ ಮಾತನಾಡುತ್ತೇನೆ ಎಂದು ಡಿಕೆ ಶಿವಕುಮಾರ್ ಬಳಿ ಹೇಳಿದರು. ಅದಕ್ಕೆ ಶಿವಕುಮಾರ್ ಹೌದೆಂದು ಸೂಚಿಸಿದರು.