BengaluruPolitics

ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು; ಮಾಜಿ ಶಾಸಕಿ ಪೂರ್ಣಿಮಾ​​ ಹಾಗೂ ಅವರ ಪತಿ ಟಿ.ಡಿ.ಶ್ರೀನಿವಾಸ್ ಅವರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಪೂರ್ಣಿಮಾ ಕಾಂಗ್ರೆಸ್ ಗೆ ಸೇರ್ಪಡೆಯಾದರು.

 ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸೇರಿದಂತೆ ಹಲವು ನಾಯಕರು ಈ ವೇಳೆ ಹಾಜರಿದ್ದರು.

ಎ.ಕೃಷ್ಣಪ್ಪ ಪುತ್ರಿ ಪೂರ್ಣಿಮಾಗೆ ಟಿಕೆಟ್​ ತಪ್ಪಲು ನಾನೂ ಸ್ವಲ್ಪ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಾಜಿ ಶಾಸಕಿ ಪೂರ್ಣಿಮಾ ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಟಿಕೆಟ್ ತಪ್ಪಿಸಿದ್ದು ನಾನೇ ಅಂತಾ ಗೊತ್ತಿದ್ದರೂ ಸಿಟ್ಟು ಮಾಡಿಕೊಂಡಿಲ್ಲ, ಭೈರತಿ ಬಸವರಾಜಗೆ ಟಿಕೆಟ್​ ಕೊಡಿಸಲು ಹೋಗಿ ಇವರಿಗೆ ತಪ್ಪಿತು. ಬಿಜೆಪಿ ಶಾಸಕರಾದರೂ ಕಾಂಗ್ರೆಸ್ ರಕ್ತ ಪೂರ್ಣಿಮಾರಲ್ಲಿ ಹರಿಯುತ್ತಿತ್ತು. ಶ್ರೀನಿವಾಸ್ ಕೂಡ ಒಲ್ಲದ ಮನಸ್ಸಿನಿಂದಲೇ ಬಿಜೆಪಿಯಲ್ಲಿ ಇದ್ದರು. ಕೃಷ್ಣಪ್ಪ, ಶ್ರೀನಿವಾಸ್ ಇಬ್ಬರೂ ಸಾಮಾಜಿಕ ನ್ಯಾಯದ ಪರ ಇರುವವರು. ಕಾಂಗ್ರೆಸ್ ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವ ಪಕ್ಷ. ಸಮಾಜವನ್ನು ಜಾತಿ ಧರ್ಮದ ಆಧಾರದ ಮೇಲೆ ಒಡೆಯುವ ಪಕ್ಷವಲ್ಲ ಎಂದರು.

Share Post