BengaluruHealth

ಒಮಿಕ್ರಾನ್‌ ಸೋಂಕಿತರಿಗೆ ವಿಶೇಷ ವಾರ್ಡ್‌: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು: ವಾರದೊಳಗೆ ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್‌ ರೂಪಾಂತರಿ ವೈರಸ್‌ ತಡೆಯಲು ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದ್ದಾರೆ.

ಆರೋಗ್ಯಸೌಧದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಅವರು, ಕೊರೊನಾ ಮೂರನೇ ಅಲೆ ಹಾಗೂ ಒಮಿಕ್ರಾನ್‌ ತಡೆಯಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಹೇಳಿದರು. ಒಮಿಕ್ರಾನ್‌ ಸೋಂಕಿಗೆ ಚಿಕಿತ್ಸೆ ನೀಡಲು ವಿಶೇಷ ವಾರ್ಡ್‌ ತೆರೆಯಲು ಮುಂದಾಗಿದ್ದೇವೆ. ಡೆಲ್ಟಾ ಹಾಗೂ ಒಮಿಕ್ರಾನ್‌ಗೆ ಒಂದೇ ಕಡೆ ಚಿಕಿತ್ಸೆ ನೀಡಬೇಕೆ..? ಅಥವಾ ಬೇರೆ ಬೇರೆ ವಾರ್ಡ್‌ ತೆರೆಯಬೇಕೆ ಎಂಬುದರ ಬಗ್ಗೆಯೂ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸುಧಾಕರ್‌ ಹೇಳಿದರು.

ಇಂತಹ ಕಠಿಣ ಸಂದರ್ಭದಲ್ಲಿ ಎಲ್ಲರೂ ಜವಾಬ್ದಾರಿಯಿಂದ ವರ್ತಿಸಬೇಕು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕೆಂದು ಕರೆ ನೀಡಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌, ಹಿರಿಯ ವೈದ್ಯರೆಲ್ಲಾ ಚಿಕಿತ್ಸೆ ನೀಡಲು ಮುಂದಾಗಬೇಕು. ರಾಜ್ಯದ 21 ಜಿಲೆಗಳಲ್ಲಿ ವೈದ್ಯಕೀಯ ಶಿಕ್ಷಣ ಸಂಸ್ಥೆಗಳಿವೆ. ಇಲ್ಲಿ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡುತ್ತೇವೆಂದು ಹೇಳಿದರು.

Share Post