Bengaluru

2400 ಪೊಲೀಸ್‌ ಪೇದೆಗಳ ನೇಮಕ ಮಾಡಲಾಗುತ್ತೆ; ಸಿಎಂ ಸಿದ್ದರಾಮಯ್ಯ

ಬೆಂಗಳೂರು; ರಾಜ್ಯದಲ್ಲಿ 2400 ಪೊಲೀಸ್‌ ಪೇದೆಗಳ ನೇಮಕಾತಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿಎಆರ್‌ ಮೈದಾನದಲ್ಲಿ ನಡೆದ ಪೊಲೀಸ್‌ ಸಂಸ್ಮರಣಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.

ಕರ್ತವ್ಯ ನಿರತರಾಗಿರುವಾಗ ಪೊಲೀಸರು ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ ಕೊಡಲಾಗುವುದು ಎಂದು ಸಿಎಂ ಇದೇ ವೇಳೆ ತಿಳಿಸಿದರು. ರಾಜ್ಯದಲ್ಲಿ ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲು ನಿರ್ಧಾರ ಮಾಡಿದ್ದೇವೆ.

2, 225 ಪೊಲೀಸ್ ವಸತಿಗಾಗಿ 450ಕೋಟಿ ರೂಪಾಯಿ ಅನುದಾನವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಅಧಿಕಾರಿಗಳ ಕಚೇರಿ ನಿರ್ವಹಣೆಗೆ ಕೂಡ ಹಣ ರಿಲೀಸ್‌ ಮಾಡಿದ್ದೇವೆ. ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಕುಟುಂಬಸ್ಥರಿಗಾಗಿ ಆರೋಗ್ಯ ಭಾಗ್ಯ ಯೋಜನೆ ಅಡಿ ನೂರು ಕೋಟಿ ಕೊಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

 

Share Post