BengaluruSports

ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ ಪಾಕಿಸ್ತಾನ ತಂಡದ ಅಭಿಮಾನಿ

ಬೆಂಗಳೂರು; ನಿನ್ನೆ ಬೆಂಗಳೂರಿನಲ್ಲಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯ ನಡೆಯಿತು. ಆಸ್ಟ್ರೇಲಿಯಾ-ಪಾಕಿಸ್ತಾನದ ನಡುವಿನ ಈ ಪಂದ್ಯದ ಮೇಲೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಾಕ್‌ ಅಭಿಮಾನಿಯೊಬ್ಬ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಘೋಷಣೆ ಕೂಗಿದ್ದಾನೆ. ಇದನ್ನು ಕೂಗಬಾರದು ಎಂದು ಪೊಲೀಸರು ಎಚ್ಚರಿಕೆ ಕೊಟ್ಟಿದ್ದಾರೆ. ಆಗ ವಾಗ್ವಾದ ನಡೆದಿದೆ.

ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದೆ. 43 ಸೆಕೆಂಡ್ಸ್ ಇರುವ ಆ ವಿಡಿಯೋದಲ್ಲಿ, ಪಾಕ್‌ ತಂಡದ ಅಭಿಮಾನಿ ಪಾಕಿಸ್ತಾನ್ ತಂಡದ ಜರ್ಸಿಯನ್ನು ಹಾಕಿಕೊಂಡು ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದ. ಆತ ಪಾಕಿಸ್ತಾನ್‌ ಜಿಂದಾಬಾದ್‌ ಎಂದು ಕೂಗಿದ್ದಾನೆ. ಈ ವೇಳೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾನೆ. ನಾನು ಪಾಕಿಸ್ತಾನದಿಂದ ಬಂದಿದ್ದೇನೆ. ನಾನು ಪಾಕಿಸ್ತಾನ್ ಜಿಂದಾಬಾದ್​ ಎಂದು ಕೂಗಬಾರದೇ..? ಹಾಗಿದ್ದರೆ ನಾನು ಏನೆಂದು ಕೂಗಬೇಕು? ಎಂದು ಪ್ರಶ್ನೆ ಮಾಡಿದ್ದಾನೆ.

ಈ ಸಮಯದಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ‘ಜಿಂದಾಬಾದ್​’ಗೆ ಅವಕಾಶ ಇಲ್ಲ ಎಂದಿದ್ದಾರೆ. ಅಲ್ಲದೇ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗದಂತೆ ಮನವಿ ಮಾಡಿಕೊಳ್ಳುತ್ತಾರೆ.

Share Post