ತ್ಯಾಜ್ಯ, ಕೊಳಚೆಯಿಂದ ಓಡಲಿವೆ ವಾಹನಗಳು; ಗ್ರೀನ್ ಹೈಡ್ರೋಜನ್ ಬಳಕೆಗೆ ಕೇಂದ್ರ ಚಿಂತನೆ..!
ನವದೆಹಲಿ: ನಗರ ಪ್ರದೇಶಗಳಲ್ಲಿ ಉತ್ಪತ್ತಿಯಾಗುವ ಘನತ್ಯಾಜ್ಯ ಹಾಗೂ ಕೊಳಚೆ ನೀರಿನಿಂದ ಗ್ರೀನ್ ಹೈಡ್ರೋಜನ್ ಉತ್ಪಾದಿಸಲು ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ. ಗ್ರೀನ್ ಹೈಡ್ರೋಜನ್‌ನ್ನು ದೊಡ್ಡ ಮಟ್ಟದಲ್ಲಿ ಉತ್ಪಾದನೆ ಮಾಡಿ, ಬಸ್, ಕಾರು, ಟ್ರಕ್‌ಗಳನ್ನು ಓಡಿಸಲು ಚಿಂತನೆ ನಡೆಸಲಾಗುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ದೆಹಲಿಯಲ್ಲಿ ನಡೆದ 6ನೇ ರಾಷ್ಟ್ರೀಯ ಹಣಕಾಸು ಶೃಂಗದಲ್ಲಿ ಮಾತನಾಡಿದ ಅವರು,‘ಕಸಕ್ಕೆ ಮೌಲ್ಯ ತಂದುಕೊಡಲು ನಾನು ಪ್ರಯತ್ನಿಸುತ್ತಿದ್ದೇವೆ. ನಗರ ಪ್ರದೇಶಗಳಲ್ಲಿ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿದೆ. ಹೀಗಾಗಿ ಕಸ ಹಾಗೂ ಚರಂಡಿ ನೀರನ್ನು ಬಳಸಿಕೊಂಡು ಗ್ರೀನ್ ಹೈಡ್ರೋಜನ್ ತಯಾರಿಸಲು ಮುಂದಾಗಿದ್ದೇವೆ. ನಾನು ಫರಿದಾಬಾದ್‌ನ ತೈಲ ಸಂಶೋಧನಾ ಸಂಸ್ಥೆಯಲ್ಲಿ ಉತ್ಪಾದಿಸುವ ಹಸಿರು ಹೈಡ್ರೋಜನ್‌ನಿಂದ ಚಲಿಸುವ ಪೈಲಟ್ ಪ್ರಾಜೆಕ್ಟ್ ಕಾರನ್ನು ಖರೀದಿಸಿದ್ದೇನೆ. ಈ ಬಗ್ಗೆ ಜನರಲ್ಲಿ ವಿಶ್ವಾಸ ಮೂಡಿಸಲು ನಗರದಲ್ಲಿ ಓಡಿಸುತ್ತೇನೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.