BengaluruHealth

ಒಮಿಕ್ರಾನ್‌ ತಡೆಗೆ ಕಠಿಣ ನಿಯಮ ಜಾರಿ ಮಾಡಿ; ಸಿಎಂಗೆ ಎಚ್‌.ಕೆ.ಪಾಟೀಲ್‌ ಪತ್ರ

ಬೆಂಗಳೂರು: ಒಮಿಕ್ರಾನ್‌ ಬಗ್ಗೆ ನಿರ್ಲಕ್ಷ್ಯ ಬೇಡ. ಶೀಘ್ರವೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಶಾಸಕ ಹಾಗೂ ಕಾಂಗ್ರೆಸ್‌ ನಾಯಕ ಎಚ್‌.ಕೆ.ಪಾಟೀಲ್‌ ಅವರು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

‌   ನವೆಂಬರ್ 20ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ವೈದ್ಯಕೀಯ ಸಮ್ಮೇಳನವೊಂದರಲ್ಲಿ 250 ಕ್ಕೂ ಹೆಚ್ಚು ವೈದ್ಯರು ಪಾಲ್ಗೊಂಡಿದ್ದರು. ಈ ಪೈಕಿ ಕರ್ನಾಟಕ ಸರ್ಕಾರದ ವೈದ್ಯರೊಬ್ಬರಿಗೆ ಒಮಿಕ್ರಾನ್ ಸೊಂಕು ಕಾಣಿಸಿಕೊಂಡಿರುವುದು ಗಂಭೀರ ವಿಚಾರ. ಅವರ ಪತ್ನಿ ಹಾಗೂ ಮಗಳು ಮತ್ತು ಇತರೆ 3 ಜನರಿಗೂ ಪಾಸಿಟಿವ್ ಫಲಿಂತಾಶವಿದೆ.  ಈ ವೈದ್ಯಕೀಯ ಸಮ್ಮೇಳನದಲ್ಲಿ ಪಾಲ್ಗೊಂಡವರ ಪಟ್ಟಿ ಮತ್ತು ಅವರ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರನ್ನು ಈವರೆಗೂ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಹೀಗಾಗಿ ಆತಂಕಕ್ಕೆ ಕಾರಣವಾಗಿದೆ. ಆದ್ದರಿಂದ ಕೂಡಲೇ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಎಚ್‌.ಕೆ.ಪಾಟೀಲ್‌ ಅವರು ಸಿಎಂಗೆ ಮನವಿ ಮಾಡಿದ್ದಾರೆ.

ತಾಂತ್ರಿಕ ಸಲಹಾ ಸಮಿತಿಯ ೧೩೬ನೇಯ ಸಭೆಯ ಶಿಫಾರಸ್ಸುಗಳನ್ನು ತಕ್ಷಣ ಜಾರಿಗೊಳಿಸಬೇಕು. ಎಲ್ಲ ಅಂತಾರಾಷ್ಟ್ರೀಯ ಪ್ರಯಾಣಿಕರ ಸಾಂಸ್ಥಿಕ ಕ್ವಾರಂಟೈನ್ ಮಾಡಬೇಕು. ವಿದೇಶದಿಂದ ಬಂದವರನ್ನು ಕಡ್ಡಾಯವಾಗಿ ತಪಾಸಣೆಗೆ ಒಳಪಡಿಸಬೇಕು ಎಂದು ಪತ್ರದಲ್ಲಿ ಮನವಿ ಮಾಡಲಾಗಿದೆ.

Share Post