ಸಿಎಂ ಸಭೆ ಅಂತ್ಯ; ವ್ಯಾಕ್ಸಿನೇಷನ್ ಹೆಚ್ಚಳಕ್ಕೆ ಬೊಮ್ಮಾಯಿ ಸೂಚನೆ
ಬೆಂಗಳೂರು: ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಇವತ್ತು ಎರಡು ಗಂಟೆಗೂ ಹೆಚ್ಚು ಕಾಲ ಮೀಟಿಂಗ್ ನಡೆಸಿದರು. ಒಮಿಕ್ರಾನ್ ಸೋಂಕು ಹರಡದಂತೆ ತಡೆಯಲು ಏನೆಲ್ಲಾ ಕ್ರಮ ಕೈಗೊಳ್ಳಬೇಕು..? ಏನೆಲ್ಲಾ ಬಿಗಿ ನಿಯಮಗಳನ್ನು ಜಾರಿಗೆ ತರಬೇಕು..? ಎಂಬುದರ ಬಗ್ಗೆ ಸಿಎಂ ಬೊಮ್ಮಾಯಿ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಚರ್ಚೆ ನಡೆಸಿದ್ದಾರೆ. ಸಂಜೆ ವೇಳೆ ತಜ್ಞರ ಸೂಚನೆಯಂತೆ ಹೊಸ ಮಾರ್ಗಸೂಚಿಗಳು ಜಾರಿಯಾಗುವ ನಿರೀಕ್ಷೆ ಇದೆ.
ಮೂಲಗಳ ಪ್ರಕಾರ ವ್ಯಾಕ್ಸಿನೇಷನ್ ಹೆಚ್ಚಳ ಮಾಡಬೇಕು. ಎಲ್ಲರೂ ಕಡ್ಡಾಯವಾಗಿ ವ್ಯಾಕ್ಸಿನ್ ಹಾಕಿಸಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂಬ ಮಾಹಿತಿ ಇದೆ.
ಇನ್ನು ಇದೇ 13ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಅದಕ್ಕಾಗಿಯೇ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗುತ್ತಿದೆ. ಇನ್ನು ಸಭೆ-ಸಮಾರಂಭಗಳಿಗೆ ಕೆಲಕಾಲ ಬ್ರೇಕ್ ಹಾಕುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.