BengaluruDistricts

ರಾಮಕೃಷ್ಣ ವಿದ್ಯಾಶಾಲೆಯ ಹಳೇ ವಿದ್ಯಾರ್ಥಿಗಳ ಸಂಘಕ್ಕೆ 50 ವರ್ಷ; ರಾಜ್ಯ ಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆ

ಮೈಸೂರು; ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘಕ್ಕೆ 50 ವರ್ಷಗಳ ಸಂಭ್ರಮ. ಈ ಹಿನ್ನೆಲೆಯಲ್ಲಿ ಶಾಲೆಯ ಸಂಸ್ಥಾಪಕರಾದ ಶ್ರೀ ಮದ್ ಸ್ವಾಮಿ ಶಾಂಭವಾನಂದಜೀ ಮಹಾರಾಜ್ ರವರ ದಿವ್ಯ ಸ್ಮರಣಾರ್ಥವಾಗಿ ರಾಜ್ಯ ಮಟ್ಟದ ಸಾಮಾನ್ಯ ಜ್ಞಾನ ಪರೀಕ್ಷೆ ಆಯೋಜಿಸಲಾಗಿದೆ.

ಒಂಭತ್ತು ಮತ್ತು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಪರೀಕ್ಷೆ ನಡೆಯಲಿದೆ. ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಬರೆಯುವ ಆಯ್ಕೆ ಇದೆ. ನವೆಂಬರ್ 5, ಭಾನುವಾರದಂದು ರಾಜ್ಯದ 94 ವಿವಿಧ ಕೇಂದ್ರಗಳಲ್ಲಿ, 701 ಶಾಲೆಗಳ ಒಟ್ಟು 17000 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.
ಪ್ರತಿ ಕೇಂದ್ರದ ಅತ್ಯುತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲೆಯಲ್ಲಿ ನಡೆಯಲಿರುವ ಗ್ರ್ಯಾಂಡ್ ಫೈನಲ್ಸ್ ನಲ್ಲಿ ಭಾಗವಹಿಸುವ ವ್ಯವಸ್ಥೆ ಮಾಡಲಾಗಿದೆ.

ಪ್ರಸ್ತುತ ಬೆಂಗಳೂರಿನ ದಕ್ಷಿಣ ನಗರ ಶೈಕ್ಷಣಿಕ ಜಿಲ್ಲೆಯ 3 ಕೇಂದ್ರಗಳಲ್ಲಿ 36 ಶಾಲೆಗಳ 800 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಮೂರು ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ವಿದ್ಯಾಶಾಲೆಯ ಪ್ರತಿಷ್ಠಿತ ಹಿರಿಯ ವಿದ್ಯಾರ್ಥಿಗಳಾದ ರಾಜ್ಯ ಸರ್ಕಾರದ ನಿವೃತ್ತ ಅಧಿಕ ಮುಖ್ಯ ಕಾರ್ಯದರ್ಶಿ ಶ್ರೀ ಕುಮಾರ ನಾಯಕ್, ಮುಖ್ಯ ಮಂತ್ರಿಗಳ ವಿಶೇಷ ಅಧಿಕಾರಿ (ನಿವೃತ್ತ), ಶ್ರೀ ಜಂಭುನಾಥ ಗುತ್ತಿ, ಹಾಗೂ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷ, ಆರ. ವಿ. ಶಿಕ್ಷಣ ಸಮಸ್ತ, ಶ್ರೀ ಎಂ.ಪಿ.ಶ್ಯಾಮ್ ಚಾಲನೆ ನೀಡಲಿದ್ದಾರೆ.

 

Share Post