ಕೊವಿಡ್ ನಿಯಂತ್ರಣಕ್ಕೆ ಕಠಿಣ ಮಾರ್ಗಸೂಚಿ; ಶಾಲಾ ಸಮಾರಂಭಕ್ಕೆ ಬ್ರೇಕ್
ಬೆಂಗಳೂರು: ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದಲ್ಲಿ ರಾಜ್ಯದಲ್ಲಿ ಹೊಸ ಕೊವಿಡ್ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರ ವಿವರ ಇಲ್ಲಿದೆ.
- ಮಾಲ್, ಚಿತ್ರಮಂದಿರ ಪ್ರವೇಶಕ್ಕೆ 2 ಡೋಸ್ ಕಡ್ಡಾಯ
- ಕೇರಳ, ಮಹಾರಾಷ್ಟ್ರ ಗಡಿಯಲ್ಲಿ ಕುಟ್ಟುನಿಟ್ಟಿನ ಕ್ರಮ
- ಟೆಸ್ಟ್, ಟ್ರ್ಯಾಕ್, ಟ್ರೀಟ್ ಹಾಗೂ ವ್ಯಾಕ್ಸಿನೇಷನ್ಗೆ ಒತ್ತು
- ಸಭೆಗಳಲ್ಲಿ 500 ಜನಕ್ಕಿಂತ ಹೆಚ್ಚು ಮಂದಿ ಸೇರುವಂತಿಲ್ಲ
- ಮದುವೆ ಸಮಾರಂಭಗಳಿಗೂ 500ಕ್ಕಿಂತ ಹೆಚ್ಚು ಜನ ಸೇರುವಂತಿಲ್ಲ
- ಎಲ್ಲಾ ಸರ್ಕಾರಿ ಸಿಬ್ಬಂದಿಗೆ 2 ಡೋಸ್ ಲಸಿಕೆ ಕಡ್ಡಾಯ
- ಗ್ರಾಮೀಣ ಭಾಗದಲ್ಲಿ ಮಾಸ್ಕ್ ಹಾಕದಿದ್ದರೆ 100 ರೂಪಾಯಿ ದಂಡ
- ರೂಲ್ಸ್ ಬ್ರೇಕ್ ಮಾಡಿದರೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ
- ಶಾಲಾ ಮಕ್ಕಳ ಪೋಷಕರು 2 ಡೋಸ್ ಲಸಿಕೆ ಪಡೆದಿರಬೇಕು
- ಶಾ-ಕಾಲೇಜುಗಳಲ್ಲಿ ಸಭೆ-ಸಮಾರಂಭಕ್ಕೆ ಅವಕಾಶವಿಲ್ಲ
- ಏರ್ಪೋರ್ಟ್ಗಳಲ್ಲಿ ನೆಗೆಟಿವ್ ರಿಪೋರ್ಟ್ ಬಂದರೆ ಮಾತ್ರ ಹೊರಕ್ಕೆ
- ರಾಜ್ಯದಲ್ಲಿ ಪ್ರತಿನಿತ್ಯ 1 ಲಕ್ಷ ಡೋಸ್ ಲಸಿಕೆ ವಿತರಣೆ
- ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತಿಲ್ಲ
- 2022ರ ಜನವರಿ 15ರವರೆಗೆ ಯಾವುದೇ ಕಾರ್ಯಕ್ರಮ ನಡೆಸುವಂತಿಲ್ಲ
- ಈಗ ವರದಿಯಾಗಿರುವ ಎರಡೂ ಪ್ರಕರಣಗಳ ಪರೀಕ್ಷಾ ವರದಿಯನ್ನು ವಿಶ್ಲೇಷಿಸಿ ಸಲಹೆ ನೀಡುವಂತೆ ಸಿಎಂ ಸೂಚನೆ
- ಭಾರತ ಸರ್ಕಾರಕ್ಕೆ ಪತ್ರ ಬರೆದು, ಎನ್ ಸಿ ಬಿ ಎಸ್ ಪ್ರಯೋಗಾಲಯದ ವಿವರವಾದ ವರದಿ ಒದಗಿಸುವಂತೆ ಮನವಿ ಮಾಡಲಾಗುವುದು
- ನರ್ಸಿಂಗ್, ಅರೆವೈದ್ಯಕೀಯ ತರಬೇತಿ ಸಂಸ್ಥೆಗಳಲ್ಲಿ ಶೇ. 100 ರಷ್ಟು ಪರೀಕ್ಷೆ ನಡೆಸುವುದು. 65 ವರ್ಷ ಮೇಲಿನ ವ್ಯಕ್ತಿಗಳು ಹಾಗೂ ಇತರ ಆರೋಗ್ಯ ಸಮಸ್ಯೆ ಇರುವ ವ್ಯಕ್ತಿಗಳಿಗೆ ಸಹ ಪರೀಕ್ಷೆ ನಡೆಸಲಾಗುವುದು.
- ಶಾಲೆಗಳಲ್ಲಿ ಸದ್ಯಕ್ಕೆ ತರಗತಿಗಳನ್ನು ಯಥಾಸ್ಥಿತಿಯಲ್ಲಿ ಮುಂದುವರೆಸಲಾಗುವುದು. ಅದಾಗ್ಯೂ ಶಾಲೆಗಳಲ್ಲಿ ತೀವ್ರ ನಿಗಾ ವಹಿಸಲು ಸೂಚಿಸಲಾಗಿದೆ.
- ಪರೀಕ್ಷಾ ಸಾಮರ್ಥ್ಯ ಹಾಗೂ ಪರೀಕ್ಷಾ ಪ್ರಮಾಣದ ಗುರಿ ಹೆಚ್ಚಿಸಲಾಗುವುದು. (increased to 1 lakh) ವಿಶೇಷವಾಗಿ ಆರೋಗ್ಯ ಕಾರ್ಯಕರ್ತರ ಪರೀಕ್ಷೆ ಹೆಚ್ಚಿಸಬೇಕೆಂದು ಸೂಚನೆ ನೀಡಲಾಗಿದೆ. ಇದಕ್ಕೆ ಅಗತ್ಯ ಮಾನವ ಸಂಪನ್ಮೂಲ ಒದಗಿಸಲು ತೀರ್ಮಾನಿಸಲಾಯಿತು.
- ಆರೋಗ್ಯ ಇಲಾಖೆ ಚಿಕಿತ್ಸಾ ಸೌಲಭ್ಯ ಒದಗಿಸಲು ಸಿದ್ಧತೆ ನಡೆಸಿಕೊಳ್ಳಬೇಕು. ಆಕ್ಸಿಜನೇಟೆಡ್ ಬೆಡ್ ಗಳನ್ನು ಸಜ್ಜುಗೊಳಿಸಬೇಕು; ಆಕ್ಸಿಜನ್ ಪ್ಲಾಂಟ್ ಗಳನ್ನು ಸಜ್ಜುಗೊಳಿಸಬೇಕು ಎಂದು ಸೂಚಿಸಲಾಗಿದೆ.
- ಆಕ್ಸಿಜನ್ ಲಭ್ಯತೆ, ಸಾಗಾಣಿಕೆ, ಪೂರೈಕೆ ಜಾಲವನ್ನು ಜಾಗೃತಗೊಳಿಸಬೇಕು.