DistrictsHealth

ಸೊಳ್ಳೆಗಳಲ್ಲಿ ಜಿಕಾ ವೈರಸ್‌ ಪತ್ತೆ ವಿಚಾರ; ಸೊಳ್ಳೆಗಳ ನಾಶಕ್ಕೆ ವಿಶೇಷ ಮೀನುಗಳ ಬಳಕೆ

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮದಲ್ಲಿನ ಸೊಳ್ಳೆಗಳಲ್ಲಿ ಜಿಕಾ ವೈರಸ್‌ ಪತ್ತೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶಿಡ್ಲಘಟ್ಟ ಸುತ್ತಮುತ್ತ ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ. ಆರೋಗ್ಯ ಇಲಾಖೆಯ ಅಧಿಕಾರಿಗಳು ಈ ಭಾಗದಲ್ಲಿ ತೀವ್ರ ನಿಗಾ ಇಟ್ಟಿದ್ದಾರೆ. ಅನಾರೋಗ್ಯ ಪೀಡಿತರಿಗೆ ಹಲವು ಪರೀಕ್ಷೆಗಳನ್ನು ಮಾಡಿಸಲಾಗುತ್ತಿದೆ. ಇದರ ಜೊತೆಗೆ ಈ ಭಾಗದಲ್ಲಿ ಸೊಳ್ಳೆಗಳ ನಾಶ ಮಾಡೋದಕ್ಕೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಸೊಳ್ಳೆಗಳ ನಿಯಂತ್ರಣಕ್ಕಾಗಿ ವಿಶೇಷ ಮೀನುಗಳನ್ನು ಬಳಸಿಕೊಳ್ಳಲಾಗುತ್ತಿದೆ.

ಸೊಳ್ಳೆಗಳು ನಿಂತ ನೀರಿನಲ್ಲಿ ಕೂರುತ್ತವೆ. ಅಲ್ಲೇ ಮೊಟ್ಟೆಗಳನ್ನಿಡುವುದರಿಂದ ಸುಳ್ಳೆಗಳು ನಿಂತ ನೀರಿನಲ್ಲೇ ಉತ್ಪತ್ತಿಯಾಗೋದು. ಹೀಗಾಗಿ ನಿಂತ ನೀರಿನಲ್ಲಿ ಗಪ್ಪಿ ಹಾಗೂ ಗಾಂಬೋಸಿಯಾ ಜಾತಿಯ ಮೀನುಗಳನ್ನು ಬಿಡಲಾಗುತ್ತಿದೆ. ಹೀಗೆ ಮಾಡುವುದರಿಂದ ಆ ಮೀನುಗಳು ನೀರಿನ ಮೇಲೆ ಕೂರುವ ಸೊಳ್ಳೆಗಳು ಹಾಗೂ ಅವುಗಳ ಮೊಟ್ಟೆಗಳನ್ನು ತಿನ್ನುತ್ತವೆ. ಇದರಿಂದಾಗಿ ಸೊಳ್ಳೆಗಳ ಸಂತತಿಯನ್ನು ಕಡಿಮೆ ಮಾಡಬಹುದಾಗಿದೆ.

ಹೀಗಾಗಿ ಆರೋಗ್ಯ ಇಲಾಖೆ ಸಿಬ್ಬಂದಿಯ ತಲಕಾಯಲಬೆಟ್ಟ ಗ್ರಾಮದಲ್ಲಿ ಗಪ್ಪಿ ಹಾಗೂ ಗಾಂಬೋಸಿಯಾ ಮೀನುಗಳನ್ನು ಹಿಡಿದುಕೊಂಡು ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಜಿಲ್ಲಾ ಆರೋಗ್ಯಾಧಿಕಾರಿ ಮಹೇಶಕುಮಾರ್, ತಾಲೂಕು ಆರೋಗ್ಯಾಧಿಕಾರಿ ವೆಂಕಟೇಶಮೂರ್ತಿ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ, ಆಶಾ ಕಾರ್ಯಕರ್ತರು ಗ್ರಾಮದಲ್ಲಿ ಮೊಕ್ಕಾಂ ಹೂಡಿದ್ದಾರೆ.

 

Share Post