ಬಹಿರಂಗ ಹೇಳಿಕೆ ಕೊಟ್ಟು ಭವಿಷ್ಯ ಹಾಳು ಮಾಡಿಕೊಳ್ಳಬೇಡಿ; ಸಚಿವರು, ಶಾಸಕರಿಗೆ ಡಿಕೆಶಿ ಎಚ್ಚರಿಕೆ
ಬೆಂಗಳೂರು; ಬಹಿರಂಗ ಹೇಳಿಕೆಗಳನ್ನು ಕೊಟ್ಟು ನಿಮ್ಮ ರಾಜಕೀಯ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಚಿವರು ಹಾಗೂ ಶಾಸಕರಿಗೆ ಎಚ್ಚರಿಕೆಯನ್ನು ಕೊಟ್ಟಿದ್ದಾರೆ. ಸಿಎಂ ಹುದ್ದೆ ವಿಚಾರವಾಗಿ ಹೈಕಮಾಂಡ್ ಎಚ್ಚರಿಕೆಯ ನಡುವೆಯೂ ಕೆಲ ಶಾಸಕರು, ಸಚಿವರು ಈ ಬಗ್ಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ನಿವಾಸದ ಬಳಿ ಮಾತನಾಡಿದ ಡಿ.ಕೆ.ಶಿವಕುಮಾರ್, ಬಹಿರಂಗ ಹೇಳಿಕೆ ನೀಡಿ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಲು ಹೋಗಬೇಡಿ ಎಂದು ಖಡಕ್ ಎಚ್ಚರಿಕೆ ಕೊಟ್ಟರು.
ಇನ್ನು ಇದೇ ವೇಳೆ ಐಟಿ, ಇಡಿ, ಸಿಬಿಐಗೆ ನಾನು ಭಯಬೀಳೋದಿಲ್ಲ. ಆ ಬಗ್ಗೆ ನಾನು ಯಾವುದೇ ತಲೆ ಕೆಡಿಸಿಕೊಳ್ಳೋದಿಲ್ಲ ಎಂದರು. ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ಗೆ ಅತಿಹೆಚ್ಚು ಸ್ಥಾನಗಳು ಬರುವುದಕ್ಕಾಗಿ ನಾವೆಲ್ಲಾ ಒಗ್ಗಟ್ಟಾಗಿ ಶ್ರಮಿಸುತ್ತೇವೆ ಎಂದೂ ಡಿ.ಕೆ.ಶಿವಕುಮಾರ್ ಇದೇ ವೇಳೆ ತಿಳಿಸಿದರು.