Bengaluru

ಇಂದಿನಿಂದ ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ತ್ರಿಫೇಸ್‌ ವಿದ್ಯುತ್‌

ಬೆಂಗಳೂರು; ಮಳೆ ಸರಿಯಾಗಿ ಆಗದ ಕಾರಣ ವಿದ್ಯುತ್‌ ಉತ್ಪಾದನೆ ಕುಂಠಿತವಾಗಿದೆ. ಹೀಗಾಗಿ ಸರಿಯಾಗಿ ವಿದ್ಯುತ್‌ ಪೂರೈಕೆ ಇಲ್ಲದೆ ರೈತರು ಪರದಾಡುತ್ತಿದ್ದರು.  ಹೀಗಾಗಿ ರಾಜ್ಯ ಸರ್ಕಾರ ಇಂದಿನಿಂದ ರೈತರ ಪಂಪ್‌ಸೆಟ್‌ಗಳಿಗೆ ದಿನಕ್ಕೆ ಏಳು ಗಂಟೆಗಳ ತ್ರಿಫೇಸ್‌ ವಿದ್ಯುತ್‌ ಪೂರೈಕೆ ಮಾಡಲು ತೀರ್ಮಾನ ಮಾಡಿದೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನಾವು ಮೊದಲಿಗೆ ದಿನಕ್ಕೆ ಐದು ಗಂಟೆ ವಿದ್ಯುತ್‌ ಕೊಡಬೇಕೆಂದು ತೀರ್ಮಾನ ಮಾಡಿದ್ದೆವು. ಆದ್ರೆ ಅದು ಸಾಕಾಗುತ್ತಿಲ್ಲ. ಹೀಗಾಗಿ ದಿನಕ್ಕೆ ಏಳು ಗಂಟೆ ವಿದ್ಯುತ್‌ ನೀಡಲು ತೀರ್ಮಾನಿಸಿದ್ದೇವೆ ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಅಧಿಕಾರಿಗಳ ಜೊತೆ ನಾನು ಪರಿಶೀಲನೆ ಸಭೆ ನಡೆಸಿದ್ದೇನೆ. ಸದ್ಯ ಭತ್ತ ಬೆಳೆಯುವ ಕೆಲ ಪ್ರದೇಶಗಳಲ್ಲಿ ಮಾತ್ರ ಏಳು ಗಂಟೆ ವಿದ್ಯುತ್‌ ನೀಡಲಾಗುತ್ತಿತ್ತು. ಆದ್ರೆ ಇನ್ಮೇಲೆ ಎಲ್ಲಾ ಕಡೆಯೂ ಏಳು ಗಂಟೆ ನೀಡಲು ಸೂಚಿಸಿದ್ದೇನೆ ಎಂದು ಸಿಎಂ ಹೇಳಿದ್ದಾರೆ.

 

Share Post