BengaluruPolitics

ಹೈಕಮಾಂಡ್‌ ಟಿಕೆಟ್‌ ಕೊಡಲ್ಲ ಅಂದಿತ್ತು, ಅದಕ್ಕೆ ಸದಾನಂದಗೌಡ ರಾಜಕೀಯ ನಿವೃತ್ತಿ; ಬಿಎಸ್‌ವೈ

ಬೆಂಗಳೂರು; ಲೋಕಸಭಾ ಚುನಾವಣೆಗೆ ಟಿಕೆಟ್‌ ಕೊಡೋದಿಲ್ಲ ಎಂದು ಬಿಜೆಪಿ ಹೈಕಮಾಂಡ್‌ ನೇರವಾಗಿ ಹೇಳಿಬಿಟ್ಟಿದೆ. ಈ ಕಾರಣಕ್ಕಾಗಿ ಮಾಜಿ ಸಿಎಂ ಹಾಗೂ ಮಾಜಿ ಕೇಂದ್ರ ಸಚಿವ ಸದಾನಂದಗೌಡರು ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ರೌಂಡ್ಸ್‌ ಹಾಕುತ್ತಿರುವ ಅವರು, ರಾಜರಾಜೇಶ್ವರಿ ನಗರದಲ್ಲಿ ಮಾತನಾಡಿದ್ದಾರೆ. 

ಸದಾನಂದಗೌಡ ಅವರು ಚುನಾವಣಾ ರಾಜಕೀಯದಿಂದ ನಿವೃತ್ತರಾಗಿದ್ದಾರೆ. ಆದರೂ ಅವರು ಸಕ್ರಿಯ ರಾಜಕಾರಣದಲ್ಲಿರುತ್ತಾರೆ, ಚುನಾವಣೆಯಲ್ಲಿ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ ಎಂದು ಯಡಿಯೂರಪ್ಪ ಹೇಳಿದರು. ಇನ್ನು ಶಾಸಕ ಎಸ್‌.ಟಿ.ಸೋಮಶೇಖರ್‌ ಪಕ್ಷ ಬಿಟ್ಟುಹೋಗುವ ಬಗ್ಗೆ ಮಾತನಾಡಿದ ಯಡಿಯೂರಪ್ಪ ಅವರು, ನಾನು ಅವರ ಜೊತೆ ಮಾತನಾಡಿದ್ದೇನೆ. ಅವರು ಯಾವುದೇ ಕಾರಣಕ್ಕೂ ಪಕ್ಷ ಬಿಡೋದಿಲ್ಲ. ಬಿಜೆಪಿಯಲ್ಲೇ ಇರಲಿದ್ದಾರೆ ಎಂದು ಹೇಳಿದರು.

 

Share Post