ಗಂಡನ ಅನೈತಿಕ ಸಂಬಂಧಕ್ಕೆ ಬೇಸರ; ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ
ಹುಬ್ಬಳ್ಳಿ; ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಜೋರಾದ ಕಿತ್ತಾಟ ನಡೆದಿದೆ. ಗಂಡನ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ, ಮಕ್ಕಳು ಮಹಿಳೆಯೊಬ್ಬಳನ್ನು ಹಿಗ್ಗಾಮುಗ್ಗಾ ಥಳಿಸಿದ್ದು, ಮಾರಣಾಂತಿಕ ಹಲ್ಲೆ ಕೂಡಾ ಮಾಡಿದ್ದಾರೆ.
ಹುಬ್ಬಳ್ಳಿಯ ವಿದ್ಯಾನಗರದಲ್ಲಿ ಈ ಘಟನೆ ನಡೆದಿದೆ. ತನ್ನ ಗಂಡನ ಜೊತೆ ಸಂಬಂಧ ಇಟ್ಟುಕೊಂಡಿದ್ದಾಳೆಂದು ಆಕೆ ಕೆಲಸ ಮಾಡುವ ಸ್ಥಳಕ್ಕೆ ಹೋಗಿ ದಾಳಿ ಮಾಡಲಾಗಿದೆ. ಇಟ್ಟಿಗೆ, ಕೋಲು ಸೇರಿದಂತೆ ಹಲವು ವಸ್ತುಗಳಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಮಹಿಳೆಯ ಅಕ್ಕನ ಮೇಲೂ ಹಲ್ಲೆ ನಡೆಸಿದ್ದಾರೆ.