BengaluruPolitics

ನವೆಂಬರ್‌ 15 ಅಥವಾ 16ರಂದು ವಿಜಯೇಂದ್ರ ಪದಗ್ರಹಣ

ಬೆಂಗಳೂರು; ನವೆಂಬರ್‌ 15 ಅಥವಾ 16ರಂದು ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇದಕ್ಕಾಗಿ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ಮೂಲಗಳ ಪ್ರಕಾರ ನವೆಂಬರ್‌ 15 ಅಥವಾ 16ರಂದು ಸಮಾರಂಭ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಇನ್ನು ನವೆಂಬರ್‌ 17ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಆ ಸಭೆಯಲ್ಲಿ ಪಾಲ್ಗೊಂಡ ಬಳಿಕ ವಿಜಯೇಂದ್ರ ಅವರು ದೆಹಲಿಗೆ ತೆರಳಿ, ಹೈಕಮಾಂಡ್‌ ನಾಯಕರನ್ನು ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪಕ್ಷ ಸಂಘಟನೆ ಕುರಿತಂತೆ ಮಾತುಕತೆ ನಡೆಸಲಿದ್ದಾರೆ.

 

Share Post