International

ಸಮುದ್ರದಲ್ಲಿ ಅಮೆರಿಕ ಸೇನಾ ಹೆಲಿಕಾಪ್ಟರ್‌ ಪತನ; ಐವರು ಸೈನಿಕರ ಸಾವು!

ಅಮೆರಿಕ; ಯುಎಸ್ ಆರ್ಮಿ ಹೆಲಿಕಾಪ್ಟರ್ ಪೂರ್ವ ಮೆಡಿಟರೇನಿಯನ್ ಸಮುದ್ರದಲ್ಲಿ ಪತನಗೊಂಡಿದೆ. ಘಟನೆಯಲ್ಲಿ ಐವರು ಯೋಧರು ಮೃತಪಟ್ಟಿರುವುದಾಗಿ ಅಮೆರಿಕ ಘೋಷಿಸಿದೆ.

ದೈನಂದಿನ ಸೇನಾ ತರಬೇತಿಯ ಭಾಗವಾಗಿ ಇಂಧನ ತುಂಬಿಸುವಾಗ ಹೆಲಿಕಾಪ್ಟರ್ ಪತನಗೊಂಡಿದೆ ಎಂದು ತಿಳಿದುಬಂದಿದೆ. ವಿಮಾನ ಎಲ್ಲಿಂದ ಹಾರುತ್ತಿತ್ತು ಮತ್ತು ಎಲ್ಲಿ ಪತನಗೊಂಡಿದೆ ಎಂಬ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ.

“ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳು ಮತ್ತು ಸ್ನೇಹಿತರಿಗೆ ದುಖಃ ಭರಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇನೆ” ಎಂದು ಯುಎಸ್ ಅಧ್ಯಕ್ಷ ಜೋ ಬಿಡೆನ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷ ಪ್ರಾರಂಭವಾದ ನಂತರ ಅಮೆರಿಕವು ಈ ಪ್ರದೇಶದಲ್ಲಿ ತನ್ನ ಚಟುವಟಿಕೆಗಳನ್ನು ಹೆಚ್ಚಿಸಿದೆ.

Share Post