ದೀಪಾವಳಿ ಪೂಜೆ ವೇಳೆಯೇ ದುರಂತ; 7 ಮೀನುಗಾರಿಕಾ ಬೋಟುಗಳು ಬೆಂಕಿಗಾಹುತಿ!
ಉಡುಪಿ; ದೀಪಾವಳಿ ದಿನವೇ ಹಲವೆಡೆ ಬೆಂಕಿ ಅನಾಹುತಗಳು ಸಂಭವಿಸಿದೆ. ಬೆಂಗಳೂರು ಹಾಗೂ ಹೈದರಾಬಾದ್ನಲ್ಲಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದರೆ, ಉಡುಪಿಯಲ್ಲಿ ಮೀನಾಗರಿಕಾ ಬೋಟುಗಳು ಬೆಂಕಿಗಾಹುತಿಯಾಗಿವೆ.
ಉಡುಪಿಯ ಗಂಗೊಳ್ಳಿ ಮೀಗಾರಿಕಾ ಬಂದರು ಪ್ರದೇಶದಲ್ಲಿ ದೀಪಾವಳಿ ಹಿನ್ನೆಲೆಯಲ್ಲಿ ಬೋಟುಗಳನ್ನು ಲಂಗರು ಹಾಕಲಾಗಿತ್ತು. ಹಬ್ಬದ ಹಿನ್ನೆಲೆಯಲ್ಲಿ ಪೂಜೆ ನೆರವೇರಿಸಲಾಗುತ್ತಿತ್ತು. ಈ ವೇಳೆ ಬೋಟುಗಲಿಗೆ ಆಕಸ್ಮಿಕ ಬೆಂಕಿ ತಗುಲಿದೆ. ಘಟನೆಯಲ್ಲಿ ಅಕ್ಕ ಪಕ್ಕ ನಿಲ್ಲಿಸಿದ್ದ ಏಳು ಬೋಟುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ.
ಪೂಜೆ ಸಮಯದಲ್ಲಿ ಪಟಾಕಿ ಸಿಡಿಸಿದ ಕಾರಣ ಅದರ ಕಿಡಿ ತಗುಲಿ ಬೋಟ್ನಲ್ಲಿ ಬೆಂಕಿ ಹಬ್ಬಿರಬಹುದೆಂಬ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಸ್ಥಳೀಯ ಅಗ್ನಿಶಾಮಕ ದಳದವರು ಆಗಮಿಸಿದ್ದು, ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದಾರೆ.
ಘಟನೆಯಿಂದಾ ಕೋಟ್ಯಂತರ ರೂಪಾಯಿ ನಷ್ಟವಾಗಿದ್ದು, ಬೋಟುಗಳ ಮಾಲೀಕರು ಸಂಕಷ್ಟ ಅನುಭವಿಸುತ್ತಿದ್ದಾರೆ.