BengaluruPolitics

ಪ್ರವಾಸೋದ್ಯಮದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ; ಸಚಿವ ಎಚ್‌.ಕೆ. ಪಾಟೀಲ್‌

ಬೆಂಗಳೂರು;  ರಾಜ್ಯದಲ್ಲಿ “ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ” ಕಾರ್ಯಕ್ರಮದ ಮೊದಲ ಹಂತದ ಕಾರ್ಯಕ್ರಮ ಯಶಸ್ವಿಯಾಗಿದ್ದು, ಪ್ರವಾಸದ ವೇಳೆ ಬಸವನಾಡು ಕಲ್ಯಾಣ ಕರ್ನಾಟಕದಲ್ಲಿ ವೀಕ್ಷಿಸಿದ ಸ್ಮಾರಕಗಳಲ್ಲಿ ಸ್ವಚ್ಛತೆ, ಮೂಲಭೂತ ಸೌಲಭ್ಯ, ಸಂರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಬುಧವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಈ ವಿಷಯ ತಿಳಿಸಿದ ಸಚಿವರು, “ನಮ್ಮ ಸ್ಮಾರಕ ದರ್ಶನ ಮತ್ತು ಸಂರಕ್ಷಣೆಗಾಗಿ ಪ್ರವಾಸ” ಕಾರ್ಯಕ್ರಮದಡಿ, ಮೂರು ದಿನಗಳ ಮೊದಲನೇ ಹಂತದಲ್ಲಿ ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಸ್ಮಾರಕಗಳ ದರ್ಶನ ಮಾಡಲಾಯಿತು. ಭೇಟಿ ನೀಡಿದ ಬಹುತೇಕ ಸ್ಮಾರಕಗಳನ್ನು ಆಸಕ್ತ, ಖಾಸಗಿ ವ್ಯಕ್ತಿಗಳಿಗೆ ದತ್ತು ನೀಡಲಾಗಿದೆ. ಈ ಸ್ಮಾರಕಗಳ ರಕ್ಷಣೆ ಹಾಗೂ ನಿರ್ವಹಣೆಗೆ ಹಲವಾರು ಸಂಸ್ಥೆಗಳು ಸ್ವಯಂಪ್ರೇರಿತವಾಗಿ ಸರ್ಕಾರದ ದತ್ತು ಯೋಜನೆಗೆ ಸ್ಪಂದಿಸಿವೆ ಎಂದರು.

Share Post