BengaluruPolitics

ನಿಗಮ-ಮಂಡಳಿಗಳಿಗೆ ನೇಮಕ ವಿಚಾರ; ನಾಳೆ ಸುರ್ಜೇವಾಲಾ ಜೊತೆ ಮಹತ್ವದ ಮಾತು

ಬೆಂಗಳೂರು; ನಿಗಮ-ಮಂಡಳಿಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ನಾಳೆ ಮಹತ್ವದ ಚರ್ಚೆ ನಡೆಯಲಿದೆ. ನಾಳೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಅವರು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರೊಂದಿಗೆ ಸಶಭೆ ನಡೆಸಲಿರುವ ರಣದೀಪ್‌ ಸುರ್ಜೇವಾಲಾ ಅವರು, ಯಾರ್ಯಾರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಬೇಕು ಎಂಬುದರ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ.

ಲೋಕಸಭಾ ಚುನಾವಣೆ ಹತ್ತಿರದಲ್ಲಿರುವ ಹಿನ್ನೆಲೆಯಲ್ಲಿ ನಿಗಮ-ಮಂಡಳಿಗಳಿಗೆ ನೇಮಕ ಮಾಡಿದರೆ ಒಳ್ಳೆಯದು ಎಂಬ ಮಾತಿದೆ. ಈ ಕಾರಣಕ್ಕಾಗಿಯೇ ಈ ಹಿಂದೆ ದೆಹಲಿಯಲ್ಲಿ ಮೀಟಿಂಗ್‌ ನಡೆದಿತ್ತು. ಆದ್ರೆ ಸಿಎಂ ಸಿದ್ದರಾಮಯ್ಯ ಅವರು 25 ಶಾಸಕರಿಗೆ ನಿಗಮ-ಮಂಡಳಿಗಳಲ್ಲಿ ಸ್ಥಾನ ನೀಡಬೇಕೆಂದು ಕೇಳಿದ್ದರು. ಆದ್ರೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಚುನಾವಣೆ ಸಮಯದಲ್ಲಿ ನಾವು ಮಾತು ಕೊಟ್ಟಿದ್ದೇವೆ. ಪಕ್ಷಕ್ಕಾಗಿ ದುಡಿದ ಹಾಗೂ ಟಿಕೆಟ್‌ ಕೈತಪ್ಪಿದವರಿಗೆ ನಿಗಮ-ಮಂಡಳಿಗಳಲ್ಲಿ ಹೆಚ್ಚಿನ ಸ್ಥಾನ ನೀಡಬೇಕು ಎಂದಿದ್ದರು. ಈ ಕಾರಣಕ್ಕಾಗಿ ನೇಮಕ ನೆನೆಗುದಿಗೆ ಬಿದ್ದಿತ್ತು.

ಇದೀಗ ಮತ್ತೆ ಸುರ್ಜೇವಾಲಾ ಅವರು ಸಿದ್ದರಾಮಯ್ಯ ಅವರ ಡಿ.ಕೆ.ಶಿವಕುಮಾರ್‌ ಜೊತೆ ಮಾತುಕತೆಗೆ ಬರುತ್ತಿದ್ದಾರೆ. ನಾಳೆ ಬಹುತೇಕ ಲಿಸ್ಟ್‌ ಫೈನಲ್‌ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹೀಗಾಗಿ ನಾಳಿನ ಸಭೆ ಸಾಕಷ್ಟು ಮಹತ್ವ ಪಡೆದುಕೊಂಡಿದೆ.

 

Share Post