ಒಂದೇ ಕುಟುಂಬ 10 ಮಂದಿಗೆ ಸೋಂಕು; ತುಮಕೂರಲ್ಲಿ ಹೆಚ್ಚಿದ ಆತಂಕ
ತುಮಕೂರು: ತುಮಕೂರು ಜಿಲ್ಲೆಯಲ್ಲಿ ಕೊರೋನಾ ಆತಂಕ ಹೆಚ್ಚಾಗುತ್ತಿದೆ. ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ತುಮಕೂರು ನಗರದಲ್ಲಿ ವಿದ್ಯಾರ್ಥಿಗಳಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಇನ್ನೊಂದೆಡೆ, ಹಳ್ಳಿಯೊಂದರಲ್ಲಿ ಒಂದೇ ಕುಟುಂಬದ ಹತ್ತು ಮಂದಿಗೆ ಸೋಂಕು ದೃಢಪಟ್ಟಿದೆ.
ತುಮಕೂರು ಜಿಲ್ಲೆಯಲ್ಲಿ ನಿನ್ನೆ ಒಂದೇ ದಿನ ಮೂವತ್ತು ಮಂದಿಗೆ ಸೋಂಕು ದೃಢಪಟ್ಟಿದೆ. ಅದರಲ್ಲೂ ತುಮಕೂರು ತಾಲ್ಲೂಕಿನ ಪರಮನಹಳ್ಳಿಯಲ್ಲಿ ಒಂದೇ ಕುಟುಂಬದ ಹತ್ತು ಮಂದಿಗೆ ಸೋಂಕು ತಗುಲಿದೆ. ಇನ್ನು ತುಮಕೂರು ನಗರದ ಖಾಸಗಿ ನರ್ಸಿಂಗ್ ಕಾಲೇಜಿನ ಹನ್ನೆರಡು ವಿದ್ಯಾರ್ಥಿಗಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ.