ಉಗ್ರರ ಜೊತೆ ಗುಂಡಿನ ಚಕಮಕಿ; ಮಂಗಳೂರಿನ ಯೋಧ ಸೇರಿ ಐವರು ಹುತಾತ್ಮ
ಬೆಂಗಳೂರು; ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ನಿನ್ನೆ ಬೆಳಗ್ಗೆಯಿಂದ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದರಲ್ಲಿ ಇಬ್ಬರು ಕ್ಯಾಪ್ಟನ್ಗಳು ಸೇರಿದಂತೆ ಐವರು ಯೋಧರು ಹುತಾತ್ಮರಾಗಿದ್ದಾರೆ. ಭದ್ರತಾ ಪಡೆಯ ಗುಂಡಿಗೆ ಇಬ್ಬರು ಉಗ್ರರು ಕೂಡಾ ಹತರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದವರನ್ನು ಮಂಗಳೂರಿನ 63 ರಾಷ್ಟ್ರೀಯ ರೈಫಲ್ಸ್ನ ಕ್ಯಾಪ್ಟನ್ ಎಂ.ವಿ.ಪ್ರಾಂಜಲ್, 9 PARAಯ ಕ್ಯಾಪ್ಟನ್ ಶುಭಂ ಮತ್ತು ಹವಾಲ್ದಾರ್ ಮಜೀದ್ ಎಂದು ಗುರುತಿಸಲಾಗಿದೆ. 4ನೇ ಯೋಧನ ಗುರುತು ಇನ್ನೂ ಪತ್ತೆಯಾಗಿಲ್ಲ. 9 PARAನ ಸೈನಿಕರು ಕ್ಯಾಪ್ಟನ್ ಪ್ರಾಂಜಲ್ ಅವರನ್ನು ಸ್ಥಳಾಂತರಿಸಲು ಅರಣ್ಯಕ್ಕೆ ತೆರಳಿದ್ದರು. ಆದರೆ ಅವರು ಉಗ್ರಗಾಮಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದಾರೆ.