BengaluruPolitics

ಡಿಕೆಶಿ ವಿರುದ್ಧ ಸಿಬಿಐ ವಿಚಾರಣೆ ವಾಪಸ್‌ ವಿಚಾರ; ಸರ್ಕಾರವನ್ನು ಸಮರ್ಥಿಸಿಕೊಂಡ ಸಚಿವ ಪರಮೇಶ್ವರ್‌

ಬೆಂಗಳೂರು; ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ವಿಚಾರಣೆಯನ್ನು ವಾಪಸ್‌ ಪಡೆಯುವ ತೀರ್ಮಾನವನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಸಮರ್ಥನೆ ಮಾಡಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿದ ನಂತರ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದ್ದ ಕಾನೂನು ಲೋಪವನ್ನು ನಾವು ಸರಿ ಮಾಡಿದ್ದೇವೆ ಎಂದಿದ್ದಾರೆ.

ವಿರೋಧ ಪಕ್ಷಗಳ ನಾಯಕರು ಇದನ್ನು ರಾಜಕೀಯ ಪ್ರೇರಿತ ಎಂದು ಹೇಳುತ್ತಿದ್ದಾರೆ. ಆದ್ರೆ ಇದು ಹಾಗಲ್ಲ. ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಮೌಖಿಕ ನಿರ್ದೇಶನ ಕೊಟ್ಟು ಸಿಬಿಐಗೆ ವಹಿಸುವಂತೆ ಮಾಡಿದ್ದರು. ಯಡಿಯೂರಪ್ಪ ಅವರು ಕೈಗೊಂಡ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲವಾ? ಎಂದು ಪರಮೇಶ್ವರ್‌ ಪ್ರಶ್ನೆ ಮಾಡಿದ್ದಾರೆ. ನಾವು ಕಾನೂನಿನ ಚೌಕಟ್ಟಿನಲ್ಲಿ ನಿರ್ಧಾರ ಕೈಗೊಂಡಿದ್ದೇವೆ. ಇದರಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ಪರಮೇಶ್ವರ್‌ ಹೇಳಿದ್ದಾರೆ.

ಅಂದಿನ ಅಡ್ವೊಕೇಟ್ ಜನರಲ್ ಕೂಡಾ ಈ ಬಗ್ಗೆ ಹೇಳಿದ್ದಾರೆ. ಈಗ ನಮ್ಮ ಎಜಿ ಅವರು ನಮಗೆ ಅದನ್ನೇ ಹೇಳಿದ್ದು, ಕಾನೂನು ಚೌಕಟ್ಟಿನಲ್ಲಿ ನಮ್ಮ ಇತಿಮಿತಿಯಲ್ಲಿ ತೀರ್ಮಾನ ಮಾಡಿದ್ದೇವೆ ಎಂದು ಪರಮೇಶ್ವರ್‌ ಹೇಳಿದರು.

 

Share Post