ನಾಳೆ ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ
ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ಹೆಚ್ಎಎಲ್ ಸಂಸ್ಥೆ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅವರು ಬೆಂಗಳೂರಿಗೆ ಬರುತ್ತಿದ್ದಾರೆ. ನವದೆಹಲಿಯಿಂದ ವಿಶೇಷ ವಿಮಾನದಲ್ಲಿ ನಾಳೆ ಬೆಳಗ್ಗೆ 9.15ಕ್ಕೆ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಲಿದ್ದಾರೆ.
ಎಚ್ಎಎಲ್ ಕಾರ್ಯಕ್ರಮ ಮುಗಿದ ಬಳಿಕ ನರೇಂದ್ರ ಮೋದಿಯವರು ತೆಲಂಗಾಣಕ್ಕೆ ತೆರಳಲಿದ್ದಾರೆ. ನಾಳೆಯಿಂದ ಅವರು ಮೂರು ದಿನಗಳ ಕಾಲ ತೆಲಂಗಾಣದಲ್ಲಿ ಚುನಾವಣಾ ಪ್ರಚಾರ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಮೋದಿ ಬೆಂಗಳೂರು ಪ್ರವಾಸದ ವೇಳೆ ಯಾವುದೇ ಭದ್ರತಾ ಲೋಪ ಆಗದಂತೆ ಎಚ್ಚರ ವಹಿಸಲಾಗಿದೆ.