Bengaluru

ಹುತಾತ್ಮ ಯೋಧ ಕ್ಯಾಪ್ಟನ್‌ ಪ್ರಾಂಜಲ್‌ ಅಂತಿಮ ಯಾತ್ರೆ; ಜನರ ಕಂಬನಿ

ಬೆಂಗಳೂರು; ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕನ್ನಡಿಗ ಕ್ಯಾಪ್ಟನ್‌ ಪ್ರಾಂಜಲ್‌ ಅವರ ಅಂತಿಮ ಯಾತ್ರೆ ನಡೆಯಿತು. ಮೆರವಣಿಗೆ ಮಾರ್ಗದುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ನಿಂತಿದ್ದ ಜನರು, ವೀರಯೋಧನಿಗೆ ಭಾವುಕ ವಿದಾಯ ಹೇಳಿದರು.

ಕ್ಯಾಪ್ಟನ್‌ ಪ್ರಾಂಜಲ್‌ ಅವರ ಪಾರ್ಥಿವ ಶರೀರವನ್ನು ಜಿಗಣಿ ನಂದನವನ ಬಡಾವಣೆಯ ಸ್ವಗೃಹದಲ್ಲಿ  ಅಂತಿಮ ದರ್ಶನಕ್ಕಿಡಲಾಗಿತ್ತು. ಸಾವಿರಾರು ಮಂದಿ ಅಂತಮ ದರ್ಶನ ಪಡೆದರು. ನಂತರ ಅಂತಿಮ ಯಾತ್ರೆ ನಡೆಸಲಾಯಿತು.

ಜಿಗಣಿ ಓಟಿಸಿ ಸರ್ಕಲ್‌, ಬನ್ನೇರುಘಟ್ಟ ಮುಖ್ಯ ರಸ್ತೆ, ನೈಸ್‌ ರೋಡ್‌, ಕೋನಪ್ಪನ ಅಗ್ರಹಾರ ಸರ್ಕಲ್‌, ಕೂಡ್ಲುಗೇಟ್‌ ಮೂಲಕ ಹುತಾತ್ಮ ಯೋಧನ ಅಂತಿಮ ಯಾತ್ರೆ  ನಡೆಯಿತು. ಮಾರ್ಗದುದ್ದಕ್ಕೂ ನಿಂತಿದ್ದ ಜನರು ತ್ರಿವರ್ಣ ಧ್ವಜ ಹಿಡಿದು ಅಂತಿಮ ನಮನ ಸಲ್ಲಿಸಿದರು.

ಸೋಮಸುಂದರ ಪಾಳ್ಯ ಚಿತಾಗಾರದಲ್ಲಿ ಪ್ರಾಂಜಲ್‌ ಅವರ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Share Post