42 ಕೋಟಿ ಪತ್ತೆ ಪ್ರಕರಣ; ಗುತ್ತಿಗೆದಾರ ಅಂಬಿಕಾಪತಿ ಹೃದಯಾಘಾತದಿಂದ ನಿಧನ
ಬೆಂಗಳೂರು; ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ದಾಳಿ ವೇಳೆ ಗುತ್ತಿಗೆದಾರರ ಅಂಬಿಕಾಪತಿ ಮನೆಯಲ್ಲಿ 42 ಕೋಟಿ ರೂಪಾಯಿ ಪತ್ತೆಯಾಗಿತ್ತು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಮನೆಯಲ್ಲಿ ದೊಡ್ಡ ಪ್ರಮಾಣದ ಹಣ ಸಿಕ್ಕ ಮೇಳೆ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷರೂ ಆಗಿರುವ ಅಂಬಿಕಾಪತಿ ಆಘಾತಕ್ಕೀಡಾಗಿದ್ದರು. ನಿನ್ನೆ ಸಂಜೆ ಅವರಿಗೆ ಹೃದಯಾಘಾತವಾಗಿದ್ದು, ಕೂಡಲೇ ಅವರನ್ನು ಹೆಬ್ಬಾಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ದಾಳಿ ನಡೆದ ದಿನದಿಂದ ಅಂಬಿಕಾಪತಿಯವರು ಸಾಕಷ್ಟು ಮಾನಸಿಕ ಒತ್ತಡಕ್ಕೊಳಗಾಗಿದ್ದರು. ಇದಿಘ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು, ಸಾವನ್ನಪ್ಪಿದ್ದಾರೆ. ಅಕ್ಟೋಬರ್ದ 13 ರಂದು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ಆರ್. ಟಿ.ನಗರದ ಮಾಜಿ ಕಾರ್ಪೊರೇಟರ್ ಅಶ್ವತ್ಥಮ್ಮ, ಪತಿ ಆರ್.ಅಂಬಿಕಾಪತಿ ಮತ್ತು ಅಶ್ವತ್ಥಮ್ಮ ಅವರ ಬಾಮೈದ ಪ್ರದೀಪ್ ಫ್ಯ್ಲಾಟ್ ನಲ್ಲಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಅಂಬಿಕಾಪತಿಯ ಬೆಡ್ ರೂಮ್ನ ಮಂಚದ ಕೆಳಗೆ 23 ಬಾಕ್ಸ್ನಲ್ಲಿ 500 ರೂಪಾಯಿ ಮುಖಬೆಲೆಯ 42 ಕೋಟಿ ರೂಪಾಯಿ ಕಂತೆ ಕಂತೆ ಹಣ ಸಿಕ್ಕಿತ್ತು.