BengaluruHealth

ಚೀನಾದಲ್ಲಿ ನ್ಯುಮೋನಿಯಾ ಹೆಚ್ಚಳ; ಕರ್ನಾಟಕದಲ್ಲಿ ಮಾರ್ಗಸೂಚಿ ಪ್ರಕಟ

ಬೆಂಗಳೂರು; ಚೀನಾದಲ್ಲಿ ನ್ಯುಮೋನಿಯಾ ವೈರಸ್‌ ಹೆಚ್ಚಾಗಿ ಕಾಡುತ್ತಿದೆ. ಇದರಿಂದಾಗಿ ಭಾರತದಲ್ಲೂ ಆತಂಕ ಶುರುವಾಗಿದೆ. ಹೀಗಾಗಿ ಭಾರತದಲ್ಲಿ ಮುನ್ನೆಚ್ಚರಿಕೆ ವಹಿಸಲಾಗಿದೆ. ಕೇಂದ್ರ ಸರ್ಕಾರ ಕೂಡಾ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ನ್ಯುಮೋನಿಯಾ ವೈರಸ್‌ ಎದುರಿಸಲು ದೇಶಾದ್ಯಂತ ಸಿದ್ಧತೆ ನಡೆದಿದೆ. ಅದರಂತೆ ಕರ್ನಾಟಕದಲ್ಲೂ ಸರ್ಕಾರ ಹಲವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ನ್ಯುಮೋನಿಯಾ ಮತ್ತು ಇತರ ಉಸಿರಾಟದ ಕಾಯಿಲೆಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಾರ್ವಜನಿಕರಿಗೆ ರಾಜ್ಯ ಸರ್ಕಾರ ಹಲವು ಎಚ್ಚರಿಕೆಗಳು ಹಾಗೂ ಸೂಚನೆಗಳನ್ನು ನೀಡಿದೆ. ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ವರದಿ ಮಾಡುವಂತೆ ಸಲಹೆ ನೀಡಲಾಗಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊರಡಿಸಿರುವ ಮಾರ್ಗಸೂಚಿ
===============================================
೧. ಕೆಮ್ಮು ಅಥವಾ ಸೀನುವಾಗ ಬಾಯಿ ಮತ್ತು ಮೂಗನ್ನು ಕರವಸ್ತ್ರದಿಂದ ಮುಚ್ಚಿಕೊಳ್ಳಿ
೨. ಸೋಪು ಮತ್ತು ನೀರಿನಿಂದ ಕೈಗಳನ್ನು ಆಗಾಗ ತೊಳೆಯುವುದು ಒಳ್ಳೆಯದು
೩. ಕಣ್ಣು, ಮೂಗು ಅಥವಾ ಬಾಯಿಯನ್ನು ಅನಗತ್ಯವಾಗಿ ಸ್ಪರ್ಶಿಸಬಾರದು
೪. ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡುವುದು ಕಡಿಮೆ ಮಾಡಿ, ಅನಿವಾರ್ಯವಾದರೆ ಮಾಸ್ಕ್‌ ಧರಿಸಿ ಹೋಗಿ
೫. ಫ್ಲೂ ಪೀಡಿತ ವ್ಯಕ್ತಿಗಳಿಂದ ಮೂಲಭೂತ ಕನಿಷ್ಠ ಅಂತರವನ್ನು ಕಾಪಾಡಿಕೊಳ್ಳಿ
೬. ನಿದ್ರೆ ಚೆನ್ನಾಗಿ ಮಾಡಿ, ದೈಹಿಕವಾಗಿ ಯಾವಾಗಲೂ ಕ್ರಿಯಾಶೀಲರಾಗಿರಿ ಮತ್ತು ಒತ್ತಡವನ್ನು ಚೆನ್ನಾಗಿ ನಿಭಾಯಿಸಿ
೭. ನೀರನ್ನು ಹೆಚ್ಚಾಗಿ ಕುಡಿಯುವುದು ಒಳ್ಳೆಯದು, ಜೊತೆಗೆ ಪೌಷ್ಟಿಕ ಆಹಾರವನ್ನು ಸೇವಿಸುವುದು
೮. ಸಾರ್ವಜನಿಕ ಸ್ಥಳದಲ್ಲಿ ಉಗುಳಬಾರದು
೯. ಉಸಿರಾಟದ ಕಾಯಿಲೆಗಳ ಹೆಚ್ಚಿನ ಸಂಭವ ಇರುವ ಸ್ಥಳಗಳಿಗೆ ಹೋಗಬಾರದು
೧೦. ರೋಗಲಕ್ಷಣಗಳು ಉಲ್ಬಣಗೊಂಡರೆ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ಸಂಪರ್ಕಿಸಿ
೧೧. ನಿಮ್ಮ ವೈದ್ಯರನ್ನು ಸಂಪರ್ಕಿಸದೇ ಸ್ವಯಂ-ಔಷಧಿಗಳನ್ನು ತೆಗೆದುಕೊಳ್ಳಬೇಡಿ

Share Post