ಅಕ್ರಮ ಆಸ್ತಿ ಗಳಿಕೆ ಪ್ರಕರಣ; ಡಿ.ಕೆ.ಶಿವಕುಮಾರ್‌ಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆ ಭೀತಿಯಲ್ಲಿದ್ದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ಗೆ ಹೈಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಾಪಸ್ ಪಡೆಯುವುದಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಇದರಿಂದಾಗಿ ಡಿ.ಕೆ.ಶಿವಕುಮಾರ್‌ಗೆ ಈ ಕೇಸ್‌ನಲ್ಲಿ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಡಿ.ಕೆ.ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶವನ್ನು ಹಿಂಪಡೆಯಲು ರಾಜ್ಯ ಸರ್ಕಾರ ಇತ್ತೀಚೆಗಷ್ಟೇ ನಿರ್ಧಾತ ತೆಗೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಸಿಬಿಐ ತನಿಖೆ ವಿರುದ್ಧ ಹೈಕೋರ್ಟ್ನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಶಿವಕುಮಾರ್ ವಾಪಸ್ ಪಡೆಯುವುದಾಗಿ ಅವರ ಪರ ವಕೀಲರು ಕೋರ್ಟ್ಗೆ ತಿಳಿಸಿದರು. ಇದನ್ನು ಹೈಕೋರ್ಟ್ ಪರಿಗಣಿಸಿತು.
ಕಾಜಿ, ಡೋರ್ಜಿ ಪ್ರಕರಣ ಉಲ್ಲೇಖಿಸಿ ಸಿಬಿಐ ವಾದಿಸಿದ್ದನ್ನು ಹೈಕೋರ್ಟ್ ವಿಭಾಗೀಯ ಪೀಠ ಪರಿಗಣಿಸಲಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಈವರೆಗೂ ಯಾರೂ ಪ್ರಶ್ನಿಸಿಲ್ಲ. ಹೀಗಾಗಿ ಸಿಬಿಐ ಪರ ವಕೀಲ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮೇಲ್ಮನವಿ ಹಿಂಪಡೆದಿದ್ದಾರೆ ಎಂದು ಕೋರ್ಟ್ ಅಭಿಪ್ರಾಯಪಟ್ಟಿತು. ಏಕಸದಸ್ಯ ಪೀಠದಲ್ಲಿ ಸಲ್ಲಿಸಿದ್ದ ಅರ್ಜಿ ಹಾಗೂ ಮೇಲ್ಮನವಿ ಅರ್ಜಿಗಳನ್ನು ಡಿ.ಕೆ ಶಿವಕುಮಾರ್ ಪರ ವಕೀಲರು ವಾಪಸ್ ಪಡೆದಿದ್ದಾರೆ.