ಕೋರ್ಟ್ ಆದೇಶದ ಬಗ್ಗೆ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?
ಬೆಂಗಳೂರು; ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ಗೆ ಹೈಕೋರ್ಟ್ನಿಂದ ರಿಲೀಫ್ ಸಿಕ್ಕಿದೆ. ದ್ವಿಸದಸ್ಯ ಮತ್ತು ಏಕಸದಸ್ಯ ಪೀಠದಲ್ಲಿ ಸಲ್ಲಿದ್ದ ಎರಡೂ ಮೇಲ್ಮನವಿಯನ್ನು ವಾಪಸ್ ಪಡೆಯುವ ಡಿ.ಕೆ.ಶಿವಕುಮಾರ್ ನಿರ್ಧಾರವನ್ನು ಹೈಕೋರ್ಟ್ ಪುರಸ್ಕರಿಸಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಕೋರ್ಟ್ನಲ್ಲಿ ಇವತ್ತು ಏನೇನಾಯ್ತು ಎಂಬುದು ನನಗೆ ಗೊತ್ತಿಲ್ಲ. ನನ್ನ ವಕೀಲರಿಂದ ಮಾಹಿತಿ ಪಡೆಯುತ್ತೇನೆ, ಅನಂತರ ಮಾತನಾಡುತ್ತೇನೆ. ಯತ್ನಾಳ್ ಸೇರಿದಂತೆ ಯಾಯ್ಯಾರು ಏನು ಮಾತನಾಡಿದ್ದಾರೆ ಎಲ್ಲವನ್ನೂ ನಮ್ರತೆಯಿಂದ ನೋಡಿದ್ದೇನೆ ಎಂದು ಹೇಳಿದ್ದಾರೆ.
ಸೂಕ್ತ ಸಮಯದಲ್ಲಿ ಎಲ್ಲರಿಗೂ ನಾನು ಉತ್ತರ ಕೊಡುತ್ತೇನೆ. ನಾನೇನೂ ತಪ್ಪು ಮಾಡಿಲ್ಲ. ನಾನು ಮಾಡಿದ್ದೆಲ್ಲ ಪಾರ್ಟಿ ಸಲುವಾಗಿ ಎಂದೂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.