262 ಹೊಸ ಅಂಬ್ಯುಲೆನ್ಸ್ ಗಳ ಲೋಕಾರ್ಪಣೆ; ಅವುಗಳ ವಿಶೇಷತೆ ಏನು..?
ಬೆಂಗಳೂರು; ಮುಖ್ಯಮಂತ್ರಿ ಸಿದ್ದರಾಮಯ್ಯ,262 ಹೊಸ ಅಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದರು. ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಆಂಬುಲೆನ್ಸ್‌ಗಳಿಗೆ ಹಸಿರು ನಿಶಾನೆ ತೋರಿದರು.
82.02 ಕೋಟಿ ರೂ. ವೆಚ್ಚದಲ್ಲಿ 262 ಆಂಬ್ಯುಲೆನ್ಸ್ ಗಳು ಖರೀದಿಸಲಾಗಿದೆ. 262 ಪೈಕಿ 157 ಅಂಬ್ಯುಲೆನ್ಸ್ಗಳಲ್ಲಿ BLS (ಬೇಸಿಕ್ ಲೈಫ್ ಸಪೋರ್ಟ್) ಹಾಗೂ 105 ಅಂಬ್ಯುಲೆನ್ಸ್ ಅಡ್ವಾನ್ಸ್ ಲೈಫ್ ಸಪೋರ್ಟ್(ALS ) ಸೌಲಭ್ಯವಿದ್ದು, ಹೃದಯ ಮತ್ತು ಉಸಿರಾಟದ ತುರ್ತು ಪರಿಸ್ಥಿಗಳಲ್ಲಿ ಇವು ಸಹಕರಿಯಾಗಿವೆ.
ಆಂಬ್ಯುಲೆನ್ಸ್ ಗಳಲ್ಲಿ ಏನೆಲ್ಲಾ ವಿಶೇಷತೆಗಳಿವೆ?
262 ಆಂಬ್ಯುಲೆನ್ಸ್ ಗಳಲ್ಲಿ 157 ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್ ಹಾಗೂ 105 ಎಎಲ್‌ಎಸ್ (ಸುಧಾರಿತ ಲೈಫ್ ಸಪೋರ್ಟ್ ಆಂಬ್ಯುಲೆನ್ಸ್ ) ಇರಲಿವೆ. ಎಎಲ್‌ಎಸ್ ಆಂಬ್ಯುಲೆನ್ಸ್ ಗಳು ವೆಂಟಿಲೇಟರ್ ಹಾಗೂ ಡಿಫ್ರಿಬಿಲೇಟರ್‌ಗಳನ್ನು ಒಳಗೊಂಡಿವೆ. ಹೀಗಾಗಿ ಹೃದಯ ಹಾಗೂ ಉಸಿರಾಟ ಸಮಸ್ಯೆ ಹೊಂದಿರುವ ರೋಗಿಗಳಿಗೂ ಯಾವುದೇ ಪ್ರಾಣಾಪಾಯ ಇಲ್ಲದೆ ಆಸ್ಪತ್ರೆಗೆ ಸಾಗಿಸಲು ಅನುಕೂಲವಾಗುತ್ತದೆ. ಇನ್ನು ಪ್ರತಿ ಆ್ಯಂಬುಲೆನ್ಸ್ ನಲ್ಲಿ ತುರ್ತು ಸೇವೆಗಳನ್ನು ನಿರ್ವಹಿಸಲು ತರಬೇತಿ ಪಡೆದ ಒಬ್ಬ ತುರ್ತು ವೈದ್ಯಕೀಯ ತಂತ್ರಜ್ಞ (ಇಎಂಟಿ-ಶುಶ್ರೂಷಾ ಸಿಬ್ಬಂದಿ) ಮತ್ತು ಒಬ್ಬ ಪೈಲಟ್ (ಚಾಲಕ) ದಿನಕ್ಕೆ ಎರಡು ಪಾಳಿಗಳಲ್ಲಿ ಕಾರ್ಯ ನಿರ್ವಹಿಸುತ್ತಾರೆ.