Cinema

ನಟ ಶಿವರಾಂ ಅವರಿಗೆ ಸರ್ಕಾರಿ ಗೌರವದೊಂದಿಗೆ ಅಂತಿಮ ವಿದಾಯ

ಬೆಂಗಳೂರು: ನಟ ಶಿವರಾಂ ಅವರ ಪಾರ್ಥಿವ ಶರೀರವನ್ನು ಬನಶಂಕರಿ ನಿವಾಸದಿಂದ ರವೀಂದ್ರ ಕಲಾಕ್ಷೇತ್ರಕ್ಕೆ ಕೊಂಡೊಯ್ಯಲಾಗುತ್ತದೆ. ಬೆಳಗ್ಗೆ 7.30 ರಿಂದ ಬೆಳಗ್ಗೆ 10 ಗಂಟೆ ತನಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 11 ಗಂಟೆ ನಂತರ ಬನಶಂಕರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದ ಅನುಸಾರ ಅಂತಿಮ ಸಂಸ್ಕಾರ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಶಿವರಾಮಣ್ಣನಿಗೆ ಪೊಲೀಸ್ ಗೌರವದ ವಿದಾಯ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ನಿನ್ನೆ ಬನಶಂಕರಿಯ ನಿವಾಸದಲ್ಲಿ ಚಿತ್ರರಂಗದ ಹಿರಿ-ಕಿರಿಯ ಕಲಾವಿದರೆಲ್ಲರೂ ಕೂಡ ಶಿವರಾಮಣ್ಣಗೆ ಅಂತಿಮ ನಮನ ಸಲ್ಲಿಸಿದ್ರು. ದ್ವಾರಕೀಶ್, ಶ್ರೀನಾಥ್, ಅನಂತನಾಗ್, ಜಗ್ಗೇಶ್, ನಿರ್ದೇಶಕ ಭಗವಾನ್, ಶಿವಣ್ಣ, ರಾಘಣ್ಣ, ದೇವರಾಜ್, ರಮೇಶ್ ಅರವಿಂದ್, ಪ್ರೇಮಾ, ಉಮಾಶ್ರೀ, ಗಿರಿಜಾ ಲೋಕೇಶ್, ಸುಂದರರಾಜ್, ಯೋಗರಾಜ್ ಭಟ್, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಹಲವರು ಶಿವರಾಮಣ್ಣನನ್ನು ಸ್ಮರಿಸಿ ಕಂಬನಿ ಮಿಡಿದ್ರು

Share Post