13 ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್; 63 ಕಡೆ ಏಕಕಾಲದಲ್ಲಿ ದಾಳಿ!
ಬೆಂಗಳೂರು; ಲೋಕಾಯುಕ್ತ ಅಧಿಕಾರಿಗಳು ಬೆಳ್ಳಂಬೆಳ್ಳಗ್ಗೆ ರಾಜ್ಯದ ಹಲವೆಡೆ ದಾಳಿ ನಡೆಸಿದ್ದಾರೆ. ಸುಮಾರು 13 ಅಧಿಕಾರಿಗಳಿಗೆ ಸೇರಿದ 63 ಆಸ್ತಿಗಳ ಮೇಲೆ ದಾಳಿ ಮಾಡಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.
ಬೆಂಗಳೂರಿನ ಮೂರು ಕಡೆ ಹಾಗೂ ಕಲಬುರಗಿ, ಬೀದರ್, ಬಳ್ಳಾರಿ, ಕೊಪ್ಪಳ, ಚಿಕ್ಕಬಳ್ಳಾಪುರ, ಮೈಸೂರು, ಕೋಲಾರ, ಧಾರವಾಡ ಜಿಲ್ಲೆಗಳ ಹಲವು ಪರಿಶೀಲನೆ ನಡೆಸಲಾಗುತ್ತಿದೆ. ಇದರಲ್ಲಿ ಸುಮಾರು 200 ಕ್ಕೂ ಹೆಚ್ಚು ಲೋಕಾಯುಕ್ತ ಪೊಲೀಸರು ಪಾಲ್ಗೊಂಡಿದ್ದಾರೆ. ಆದಾಯ ಮೀರಿ ಆಸ್ತಿ ಗಳಿಸಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ.