Bengaluru

ರಾಜ್ಯಕ್ಕೂ ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌; ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆ

ಬೆಂಗಳೂರು; ಮಿಚಾಂಗ್‌ ಚಂಡಮಾರುತದ ಎಫೆಕ್ಟ್‌ ರಾಜ್ಯಕ್ಕೂ ತಟ್ಟಲಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲೂ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಬೆಂಗಳೂರು ನಗರದ ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಆದ್ರೆ ರಾಜ್ಯದ ಇತರ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ತಿಳಿದು ಬಂದಿದೆ. ಈಗಾಗಲೇ ತಮಿಳುನಾಡು ಹಾಗೂ ಆಂಧ್ರಪ್ರದೇಶದ ಕೆಲ ಭಾಗಗಳಲ್ಲಿ ಮಿಚಾಂಗ್‌ ಚಂಡಮಾರುತದಿಂದ ಭಾರಿ ಎಫೆಕ್ಟ್‌ ಆಗಿದೆ. ಚೆನ್ನೈನಲ್ಲಿ ವಿಮಾನ ನಿಲ್ದಾಣವೇ ಜಲಾವೃತವಾಗಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ,ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

 

Share Post