CinemaHealth

ಮಧ್ಯಾಹ್ನ 3.30ಕ್ಕೆ ಹಿರಿಯ ನಟಿ ಲೀಲಾವತಿ ಅಂತ್ಯಸಂಸ್ಕಾರ

ಬೆಂಗಳೂರು; ಹಿರಿಯ ನಟಿ ಲೀಲಾವತಿಯವರ ಅಂತ್ಯಸಂಸ್ಕಾರವನ್ನು ಅವರ ತೋಟದಲ್ಲಿಯೇ ನೆರವೇರಿಸಲು ನಿರ್ಧರಿಸಲಾಗಿದೆ. ಮಧ್ಯಾಹ್ನ 3.30 ಗಂಟೆಗೆ ಲೀಲಾವತಿಯವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಲೀಲಾವತಿಯವರ ಕುಟುಂಬದೊಂದಿಗೆ ಚರ್ಚೆ ಮಾಡಿ, ಅಂತ್ಯಸಂಸ್ಕಾರದ ಸಮಯ ಹಾಗೂ ಸ್ಥಳವನ್ನು ನಿಗದಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ. 

ಸೋಲದೇವನಹಳ್ಳಿಯ ತೋಟದಲ್ಲಿ ಲೀಲಾವತಿ ಅಂತ್ಯಕ್ರಿಯೆ ನಡೆಯಲಿದೆ. ಇಂದು ಬೆಳಗ್ಗೆ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿತ್ತು. ನಂತರ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಚಿತ್ರರಂಗ ಹಾಗೂ ವಿವಿಧ ಕ್ಷೇತ್ರಗಳ ಹಲವಾರು ಗಣ್ಯರು ಲೀಲಾವತಿಯವರ ಅಂತಮ ದರ್ಶನ ಪಡೆದಿದ್ದಾರೆ. ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರು ಲೀಲಾವತಿಯವರಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

Share Post