ಮಹಿಳೆಯನ್ನು ಬೆತ್ತಲೆ ಮಾಡಿ ಹಲ್ಲೆ ಪ್ರಕರಣ; ಸಂತ್ರಸ್ತೆಗೆ 2 ಎಕರೆ ಜಾಗ ಮಂಜೂರು
ಬೆಳಗಾವಿ; ಮಗ ಯುವತಿಯೊಂದಿಗೆ ಪರಾರಿಯಾಗಿದ್ದಾನೆ ಎಂಬ ಕಾರಣಕ್ಕೆ ಯುವತಿಯ ಪೋಷಕರು ಯುವಕ ತಾಯಿಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಘಟನೆ ಬೆಳಗಾವಿ ತಾಲ್ಲೂಕು ವಂಟಮೂರಿಯಲ್ಲಿ ನಡೆದಿತ್ತು. ಇದೀಗ ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಸರ್ಕಾರ, ಸಂತ್ರಸ್ತ ಮಹಿಳೆಗೆ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿತ್ತು. ಇದೀಗ, ಆ ಮಹಿಳೆಗೆ 2.03 ಎಕರೆ ಜಮೀನು ಮಂಜೂರು ಮಾಡಲಾಗಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ನಿರ್ದೇಶನದ ಮೇರೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮವು ಸಂತ್ರಸ್ತ ಮಹಿಳೆಗೆ 2.03 ಎಕರೆ ಜಮೀನು ನೀಡಿ ಆದೇಶ ಹೊರಡಿಸಿದೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಖಚಿತಪಡಿಸಿದ್ದಾರೆ.