ನಿರ್ಮಲಾ ಸೀತಾರಾಮನ್ ಭೇಟಿಯಾದ ಡಿ.ಕೆ.ಶಿವಕುಮಾರ್; ಬರ ಪರಿಹಾರಕ್ಕೆ ಮನವಿ
ನವದೆಹಲಿ; ನಿನ್ನೆ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದರು. ಬರ ಪರಿಹಾರದ ಹಣ ಬಿಡುಗಡೆ ಮಾಡುವಂತೆ ಪ್ರಧಾನಿಯವರನ್ನು ಒತ್ತಾಯ ಮಾಡಿದ್ದರು. ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಮಂಗಳವಾರ ಭೇಟಿ ಮಾಡಿ ಡಿ.ಕೆ.ಶಿವಕುಮಾರ್ ಮಾತುಕತೆ ನಡೆಸಿದರು. ಆದಷ್ಟು ಬೇಗ ಕರ್ನಾಟಕಕ್ಕೆ ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಈ ವೇಳೆ ನಿರ್ಮಲಾ ಸೀತಾರಾಮನ್ ಅವರನ್ನು ಡಿಕೆಶಿ ಮನವಿ ಮಾಡಿದ್ದಾರೆ.