DistrictsHealth

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಾಲ್ವರಿಗೆ ಕೊರೊನಾ ಸೋಂಕು; ಜಿಲ್ಲಾಡಳಿತದಿಂದ ಹೈ ಅಲರ್ಟ್‌

ಚಿಕ್ಕಮಗಳೂರು; ಚಿಕ್ಕಮಗಳೂರು ಕೊರೋನಾ ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿವೆ. ಇದುವರೆಗೆ ನಾಲ್ವರಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಅದೂ ಕೂಡಾ ಅವರಿಗೆ ಯಾವುದೇ ಹೊರ ರಾಜ್ಯದ ಟ್ರಾವೆಲ್‌ ಹಿಸ್ಟರಿ ಇಲ್ಲ. ಆದರೂ ಅವರಿಗೆ ಕೊರೊನಾ ವಕ್ಕರಿಸಿದೆ. ಹೀಗಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಹೈ ಅಲರ್ಟ್‌ ಘೋಷಣೆ ಮಾಡಿದೆ.

ಜಿಲ್ಲೆಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿ ಒಟ್ಟು 103 ಸರ್ಕಾರಿ ಆಸ್ಪತ್ರೆಗಳಿವೆ. ಹಾಗೆಯೇ 6 ಖಾಸಗಿ ಆಸ್ಪತ್ರೆಗಳಿಗೆ ಅಲರ್ಟ್ ಆಗಿರುವಂತೆ ಸೂಚನೆ ನೀಡಲಾಗಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 490 ಬೆಡ್, ಖಾಸಗಿಯಲ್ಲಿ 202 ಬೆಡ್, 87 ವೆಂಟಿಲೇಟರ್, ಜಂಬೋ ಆಕ್ಸಿಜನ್ ಸಿಲಿಂಡರ್ 907, 10 ಲೀಟರ್ ಆಕ್ಸಿಜನ್ ಸಿಲಿಂಡರ್, 260 ಸ್ಟಾಕ್ ಇದ್ದು, ಒಟ್ಟು 21 ಆಂಬುಲೆನ್ಸ್​ಗಳು ಸನ್ನದ್ಧವಾಗಿದೆ.

Share Post