CrimeDistricts

ಕಲಬುರಗಿ ಬಳಿ ಭೀಕರ ರಸ್ತೆ ಅಪಘಾತ; ನಾಲ್ವರು ಸ್ಥಳದಲ್ಲೇ ದುರ್ಮರಣ

ಕಲಬುರಗಿ; ಅಫಜಲಪುರ-ಕಲಬುರಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಪೂಜಾ ಎಂಬಾಕೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸಂತೋಷ್ (40), ಶಂಕರ್ (55), ಸಿದ್ದಮ್ಮ (50), ಹುಚ್ಚಪ್ಪ (05) ಎಂಬುವವರೇ ಸ್ಥಳದಲ್ಲೇ ಸಾವನ್ನಪ್ಪಿದವರು. ಗಾಯಾಳು ಪೂಜಾ ಕೂಡಾ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೃತರೆಲ್ಲರೂ ಅಫಜಲಪುರ ಮಾಡ್ಯಾಳ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇವರು ಅಫಜಲಪುರ ಕಡೆಯಿಂದ ಮಲ್ಲಾಬಾದ್ ಕಡೆ ಜೀಪ್‍ನಲ್ಲಿ ಹೊರಟಿದ್ದರು ಎಂದು ತಿಳಿದುಬಂದಿದೆ.

Share Post