ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿ ಅವರಿಗೆ 3 ವರ್ಷ ಜೈಲು
ಚೆನ್ನೈ; ತಮಿಳುನಾಡು ಶಿಕ್ಷಣ ಸಚಿವ ಪೊನ್ಮುಡಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. ಇದರ ಜತೆಗೆ ನ್ಯಾಯಾಲಯವು ಪೊನ್ಮುಡಿ ಮತ್ತು ಅವರ ಪತ್ನಿಗೆ ತಲಾ 50 ಲಕ್ಷ ರೂಪಾಯಿ ದಂಡ ಕೂಡಾ ವಿಧಿಸಿದೆ.
1.75 ಕೋಟಿ ರೂಪಾಯಿ ಅಕ್ರಮ ಆಸ್ತಿ ಪ್ರಕರಣದಲ್ಲಿ ಈ ತೀರ್ಪು ನೀಡಲಾಗಿದೆ. ಮಂಗಳವಾರ, ಮದ್ರಾಸ್ ಹೈಕೋರ್ಟ್ ಈ ಪ್ರಕರಣದಲ್ಲಿ ಪೊನ್ಮುಡಿ ಮತ್ತು ಅವರ ಪತ್ನಿಯನ್ನು ದೋಷಿ ಎಂದು ಘೋಷಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.