ಪ್ರಧಾನಿ ಮೋದಿಯನ್ನು ಭೇಟಿಯಾದ ಜೆಡಿಎಸ್ ನಿಯೋಗ
ನವದೆಹಲಿ; ಮಾಜಿ ಪ್ರಧಾನಿ ದೇವೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ರೇವಣ್ಣ ಸೇರಿ ಹಲವರ ನಿಯೋಗ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿತು.
ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್- ಬಿಜೆಪಿ ಹೊಂದಾಣಿಕೆ ಮಾಡಿಕೊಂಡಿವೆ. ಹೀಗಾಗಿ ಸೀಟು ಹಂಚಿಕೆ ವಿಚಾರವಾಗಿ ಪ್ರಧಾನಿ ಮೋದಿ ಜೊತೆ ಜೆಡಿಎಸ್ ನಿಯೋಗ ಮಾತುಕತೆ ನಡೆಸಿತು. ಈ ಬಗ್ಗೆ ಪ್ರಧಾನಿ ಮೋದಿಯವರೇ ಟ್ವೀಟ್ ಮಾಡಿದ್ದಾರೆ.
ಹೆಚ್ಡಿ ದೇವೇಗೌಡ ಅವರನ್ನು ಭೇಟಿಯಾಗುವುದು ಯಾವಾಗಲೂ ಸಂತಸದ ವಿಚಾರ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೊಂಡಿದ್ದಾರೆ.