ಪಾಠ ಮಾಡುತ್ತಿರುವಾಗಲೇ ಶಿಕ್ಷಕ ಹೃದಯಾಘಾತಕ್ಕೆ ಬಲಿ
ರಾಯಚೂರು; ಇತ್ತೀಚೆಗಷ್ಟೇ ಚಿಕ್ಕಮಗಳೂರು ಜಿಲ್ಲೆಯಲ್ಲಿ ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ನಪ್ಪಿದ್ದಳು. ಇದೀಗ ರಾಯಚೂರು ಜಿಲ್ಲೆಯಲ್ಲಿ ಶಿಕ್ಷಕರೊಬ್ಬರು ಇದೇ ರೀತಿಯ ಕುಸಿದುಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಹೇಳುತ್ತಿರುವಾಗಲೇ ಶಿಕ್ಷಕ ಸಾವನ್ನಪ್ಪಿದ್ದಾರೆ.
ರಾಯಚೂರು ಜಿಲ್ಲೆ ಸಿಂಧನೂರು ತಾಲ್ಲೂಕಿನ ಗದ್ರಟಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ದುರ್ಘಟನೆ ನಡೆದಿದೆ. ಶಾಲೆಯ ಮುಖ್ಯೋಪಾಧ್ಯಾಯ ಸೂರ್ಯ ಉಯಮಪ್ಪ ಜಾಡರ್ ಎಂಬುವವರೇ ಸಾವನ್ನಪ್ಪಿದವರು. ಇವರಿಗೆ 57 ವರ್ಷ ವಯಸ್ಸಾಗಿದ್ದು, ನಿವೃತ್ತಿಗೆ ಇನ್ನು ಮೂರು ವರ್ಷ ಬಾಕಿ ಇತ್ತು.
ಉಯಮಪ್ಪ ಜಾಡಾರ್ ಅವರು ಇಂದು ಬೆಳಗ್ಗೆ ಮಕ್ಕಳಿಗೆ ಪಾಠ ಮಾಡುತ್ತಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಅವರು ಕುಸಿದುಬಿದ್ದಿದ್ದಾರೆ. ತೀವ್ರ ಹೃದಯಾಘಾತದಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.